
ಮೊಹಾಲಿ(ಏ.30): ಪ್ರಸಕ್ತ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಕರುಣ್ ನಾಯರ್ ಅವರನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕರನ್ನಾಗಿ ಆಯ್ಕೆ ಮಾಡಿದ ನಿರ್ಧಾರವನ್ನು ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಮರ್ಥಿಸಿಕೊಂಡಿದ್ದಾರೆ.
ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಹೀನಾಯ ಸೋಲು ಕಂಡ ಬಳಿಕ ಪ್ರತಿಕ್ರಿಯಿಸಿದ ದ್ರಾವಿಡ್, ಪ್ರದರ್ಶನಕ್ಕೂ - ನಾಯಕತ್ವಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
‘‘ಒಂದೊಮ್ಮೆ ಜಹೀರ್‌ಖಾನ್ ಗಾಯಗೊಂಡರೆ ಕರುಣ್ ನಾಯರ್‌ಗೆ ಆ ಜವಾಬ್ದಾರಿ ನೀಡಬೇಕೆಂದು ಮೊದಲೇ ತೀರ್ಮಾನಿಸಿದ್ದೇವು. ಏಕೆಂದರೆ ಕಳೆದ ಬಾರಿ ಉಪನಾಯಕರಾಗಿದ್ದ ಜೆ.ಪಿ.ಡುಮಿನಿ, ಕ್ವಿಂಟನ್ ಡಿಕಾಕ್ ಇದೀಗ ತಂಡದಲ್ಲಿ ಇಲ್ಲ’’ಎಂದಿದ್ದಾರೆ.
‘‘ಕರುಣ್ ಜೂನಿಯರ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಬ್ಯಾಟಿಂಗ್ ಲಯ ತಾತ್ಕಲಿಕ ಸಮಸ್ಯೆಯಷ್ಟೇ. ಅದಕ್ಕಾಗಿ ಅವರಿಗೆ ನಾಯಕತ್ವ ನೀಡದಿದ್ದರೆ ತಪ್ಪಾಗುತ್ತದೆ’’ ಎಂದು ದ್ರಾವಿಡ್ ಹೇಳಿದ್ದಾರೆ. ಪ್ರಸಕ್ತ ಐಪಿಎಲ್‌ನಲ್ಲಿ 8 ಪಂದ್ಯಗಳಿಂದ ಕರುಣ್ ಕೇವಲ 89 ರನ್‌ಗಳಿಸಿದ್ದು, ಕಳಪೆ ಪ್ರದರ್ಶನ ಮುಂದುವರಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.