
ಜೋಹಾನ್ಸ್‌ಬರ್ಗ್(ಮೇ.13): ದಕ್ಷಿಣ ಆಫ್ರಿಕಾದ ಟೆಸ್ಟ್ ಮತ್ತು ಟಿ20 ಕ್ರಿಕೆಟ್ ತಂಡದ ನಾಯಕ ಫಾಫ್ ಡು ಪ್ಲೇಸಿಸ್, 2019ರಲ್ಲಿ ಇಂಗ್ಲೆಂಡ್'ನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್'ನಿಂದ ದೂರ ಉಳಿಯುವ ಮನಸ್ಸು ಮಾಡಿರುವುದಾಗಿ ಹೇಳಿದ್ದಾರೆ.
ಕಳೆದ 8 ವರ್ಷಗಳಿಂದ ಆಫ್ರಿಕಾ ಏಕದಿನ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದೇನೆ, ಬಿಡುವಿಲ್ಲದ ಕ್ರಿಕೆಟ್ ಆಟದಿಂದಾಗಿ ಕುಟುಂಬದ ಜತೆ ಕಾಲ ಕಳೆಯುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದಾಯದ ಬಳಿಕ ವೈಯಕ್ತಿಕ ಜೀವನಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಡುವುದಾಗಿ ಡುಪ್ಲೇಸಿಸ್ ಹೇಳಿದ್ದಾರೆ.
ಫಾಫ್ ಡು ಪ್ಲೇಸಿಸ್ 40 ಟೆಸ್ಟ್'ಗಳಿಂದ 2426 ರನ್, 107 ಏಕದಿನ ಪಂದ್ಯಗಳಿಂದ 3943 ರನ್ ಮತ್ತು 36 ಟಿ20 ಪಂದ್ಯಗಳಿಂದ 1129 ರನ್'ಗಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.