
ಬೆಂಗಳೂರು[ಮೇ.20]: ’ಈ ಸಲ ಕಪ್ ನಮ್ದೆ’ ಎನ್ನುವ ಛಲದೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ರಾಜಸ್ಥಾನ ರಾಯಲ್ಸ್ ಎದುರು ಮುಗ್ಗರಿಸುವ ಮೂಲಕ ಪ್ಲೇ ಆಫ್ ಪ್ರವೇಶಿಸುವ ಮುನ್ನವೇ ಟೂರ್ನಿಯಿಂದ ಹೊರಬಿದ್ದಿದೆ.
ಬಹುಶಃ ಆರ್’ಸಿಬಿ ಪ್ರಾಂಚೈಸಿ ಕನ್ನಡಿಗರನ್ನು ಕಡೆಗಣಿಸಿದ್ದೇ ಈ ರೀತಿಯ ಹೀನಾಯ ಪ್ರದರ್ಶನಕ್ಕೆ ಕಾರಣವಿರಬಹುದೇನೋ. ಏಕೆಂದರೆ ಕೆ.ಎಲ್ ರಾಹುಲ್, ಮನೀಶ್ ಪಾಂಡೆ, ರಾಬಿನ್ ಉತ್ತಪ್ಪ, ಕೃಷ್ಣಪ್ಪ ಗೌತಮ್, ಶ್ರೇಯಸ್ ಗೋಪಾಲ್, ಪ್ರಸಿದ್ಧ್ ಕೃಷ್ಣ ಅವರು ಪ್ರಸಕ್ತ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಆದರೆ ಈ ಕನ್ನಡಿಗರು ಆರ್’ಸಿಬಿ ಪ್ರಾಂಚೈಸಿಗೆ ಕಾಣಿಸದೇ ಇದ್ದದ್ದು ಮಾತ್ರ ವಿಪರ್ಯಾಸ.
ಸನ್’ರೈಸರ್ಸ್ ಮಣಿಸಿ ಕೋಲ್ಕತಾ ನೈಟ್’ರೈಡರ್ಸ್ ಪ್ಲೇ ಆಫ್ ಹಂತ ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಈ ಸಲ ಕಪ್ ನಮ್ದೆ ಎಂದಿದ್ದಾರೆ.
ಪಂದ್ಯ ಮುಕ್ತಾಯದ ಬಳಿಕ ರಾಬಿನ್ ಉತ್ತಪ್ಪ ಅವರೊಂದಿಗೆ ಮಾತನಾಡುತ್ತಾ, ಆರ್’ಸಿಬಿ ಪ್ಲೇ ಆಫ್ ಪ್ರವೇಶಿಸಲು ವಿಫಲವಾಗಿದೆ. ಹೀಗಾಗಿ ಕೆಕೆಆರ್ ತಂಡದಲ್ಲಿ ಸಾಕಷ್ಟು ಕನ್ನಡಿಗರಿದ್ದಾರೆ. ಹೀಗಾಗಿ ಕರ್ನಾಟಕದವರು ನಮಗೆ ಸಪೋರ್ಟ್ ಮಾಡಿ. ಈ ಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.
ಈ ಮೊದಲು ಪಂಜಾಬ್ ಸೂಪರ್’ಕಿಂಗ್ಸ್ ತಂಡದ ಕೆ.ಎಲ್ ರಾಹುಲ್ ಹಾಗೂ ಕರುಣ್ ನಾಯರ್ ಕೂಡಾ ಈ ಸಲ ಕಪ್ ನಮ್ದೆ ಎಂದಿದ್ದು ಸಾಕಷ್ಟು ವೈರಲ್ ಆಗಿತ್ತು.
ಹೀಗಿತ್ತು ಆ ಕ್ಷಣ....
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.