3ನೇ ಟೆಸ್ಟ್ ಪಂದ್ಯಕ್ಕಾಗಿ ತಂಡ ಪ್ರಕಟಿಸಿದ ಇಂಗ್ಲೆಂಡ್

Published : Aug 13, 2018, 08:55 PM ISTUpdated : Sep 09, 2018, 10:20 PM IST
3ನೇ ಟೆಸ್ಟ್ ಪಂದ್ಯಕ್ಕಾಗಿ ತಂಡ ಪ್ರಕಟಿಸಿದ ಇಂಗ್ಲೆಂಡ್

ಸಾರಾಂಶ

3ನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ಸರಣಿ ಗೆಲುವಿಗೆ ಹೊಂಚು ಹಾಕಿರುವ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದ ಕ್ರಿಕೆಟಿಗರು ಯಾರು? ಇಲ್ಲಿದೆ ವಿವರ.

ಲಂಡನ್(ಆ.13): ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಇಂಗ್ಲೆಂಡ್ ಇದೀಗ 3ನೇ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟಿಸಿದೆ. ಲಾರ್ಡ್ಸ್ ಪಂದ್ಯದ ಗೆಲುವಿನ ಬೆನ್ನಲ್ಲೇ ತಂಡ ಪ್ರಕಟಿಸಿರುವ ಇಂಗ್ಲೆಂಡ್ ಸರಣಿ ಗೆಲುವಿನ ವಿಶ್ವಾಸದಲ್ಲಿದೆ.

ಟ್ರೆಂಟ್‌ಬ್ರಿಡ್ಜ್ ಪಂದ್ಯಕ್ಕೆ ಆಯ್ಕೆ ಮಾಡಿರೋ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 13 ಮಂದಿ ಸದಸ್ಯರ ತಂಡ ಆಯ್ಕೆ ಮಾಡಿರುವ ಇಂಗ್ಲೆಂಡ್ ವಿನ್ನಿಂಗ್ ಕಾಂಬಿನೇಷನ್ ಉಳಿಸಿಕೊಂಡಿದೆ.  ನಿರೀಕ್ಷೆಯಂತೆ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅಲಭ್ಯರಾಗಿದ್ದಾರೆ.

 

 

3ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ:
ಜೋ ರೂಟ್(ನಾಯಕ), ಜೋಸ್ ಬಟ್ಲರ್, ಮೊಯಿನ್ ಆಲಿ, ಜೇಮ್ಸ್ ಆಂಡರ್ಸನ್, ಜಾನಿ ಬೈರ್‌ಸ್ಟೋ, ಸ್ಟುವರ್ಟ್ ಬ್ರಾಡ್, ಆಲಿಸ್ಟೈರ್ ಕುಕ್, ಸ್ಯಾಮ್ ಕುರ್ರನ್, ಕೆಟನ್ ಜೆನ್ನಿಂಗ್ಸ್, ಒಲ್ಲಿ ಪೋಪ್, ಜ್ಯಾಮಿ ಪೋರ್ಟರ್, ಆದಿಲ್ ರಶೀದ್, ಕ್ರಿಸ್ ವೋಕ್ಸ್.

ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 31 ರನ್ ಗೆಲುವು ಸಾಧಿಸಿದ್ದ ಇಂಗ್ಲೆಂಡ್, 2ನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 159 ರನ್ ಗೆಲುವು ದಾಖಲಿಸಿತ್ತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ 3ನೇ ಪಂದ್ಯ ಗೆದ್ದು ಸರಣಿ ಗೆಲುವು ಸಾಧಿಸಲು ಇಂಗ್ಲೆಂಡ್ ತಯಾರಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?