
ನಾಟಿಂಗ್‌ಹ್ಯಾಮ್(ಮೇ.19): ಜೇಸನ್ ರಾಯ್ ಶತಕ ಹಾಗೂ ಬೆನ್ ಸ್ಟೋಕ್ಸ್ ಸಿಡಿಸಿದ ಆಕರ್ಷಕ 71 ರನ್‌ಗಳ ಆಟದ ನೆರವಿನಿಂದ ಇಂಗ್ಲೆಂಡ್ ತಂಡ, ಪಾಕಿಸ್ತಾನ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ 3 ವಿಕೆಟ್ ಗೆಲುವು ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.
ಇದನ್ನೂ ಓದಿ: ಟೀಂ ಇಂಡಿಯಾ ಅಭ್ಯಾಸಕ್ಕೆ ಬ್ರೇಕ್- ವಿಶ್ರಾಂತಿಗೆ ಸೂಚಿಸಿದ ಬಿಸಿಸಿಐ !
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಬಾಬರ್ ಆಜಂ ಶತಕದ ನೆರವಿನಿಂದ 7 ವಿಕೆಟ್‌ಗೆ 340 ರನ್ ಗಳಿಸಿತು. ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ಇನ್ನೂ 3 ಎಸೆತ ಬಾಕಿ ಇರುವಂತೆ ಗೆಲುವು ಸಾಧಿಸಿತು.
ಸ್ಕೋರ್: ಪಾಕಿಸ್ತಾನ 340/7 (ಬಾಬರ್ 115, ಹಫೀಜ್ 59, ಟಾಮ್ 4-75), ಇಂಗ್ಲೆಂಡ್ 341/7 (ರಾಯ್ 114, ಸ್ಟೋಕ್ಸ್ 71, ವಾಸಿಂ 2-62)
ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯುತ್ತಿರುವವ ಈ ಸರಣಿ ಉಭಯ ತಂಡಗಳ ವಿಶ್ವಕಪ್ ತಯಾರಿಗೆ ಪೂರಕವಾಗಿದೆ. ಆದರೆ ಇದೀಗ 3 ಪಂದ್ಯ ಸೋತಿರುವ ಪಾಕಿಸ್ತಾನ, ಇನ್ನುಳಿದಿರುವ ಅಂತಿಮ 2 ಪಂದ್ಯ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ವಿಶ್ವಾಸದಲ್ಲಿದೆ.
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.