ಪಂದ್ಯ ಸೋತರೂ ಡ್ರೆಸ್ಸಿಂಗ್ ರೂಂನಲ್ಲಿ ಇಂಗ್ಲೆಂಡ್ ಕ್ರಿಕೆಟಿಗರು ಕುಣಿದು ಕುಪ್ಪಳಿಸಿದ್ದೇಕೆ?

Published : Jul 04, 2018, 07:59 PM ISTUpdated : Jul 04, 2018, 08:00 PM IST
ಪಂದ್ಯ ಸೋತರೂ ಡ್ರೆಸ್ಸಿಂಗ್ ರೂಂನಲ್ಲಿ ಇಂಗ್ಲೆಂಡ್ ಕ್ರಿಕೆಟಿಗರು ಕುಣಿದು ಕುಪ್ಪಳಿಸಿದ್ದೇಕೆ?

ಸಾರಾಂಶ

ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೋಲಿನ ಬಳಿಕ ಇಂಗ್ಲೆಂಡ್ ಕ್ರಿಕೆಟಿಗರು, ಡ್ರೆಸ್ಸಿಂಗ್ ರೂಂನಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ. ಡ್ರೆಸ್ಸಿಂಗ್ ರೂಂನಲ್ಲಿ ಕ್ರಿಕೆಟಿಗರು ಕುಣಿದು ಕುಪ್ಪಳಿಸಿದ್ದಾರೆ. ಅಷ್ಟಕ್ಕೂ ಸೋಲಿನ ನಡುವೆಯೂ ಇಂಗ್ಲೆಂಡ್ ತಂಡ ಸಂಭ್ರಮಾಚರಣೆ ನಡೆಸಿದ್ದೇಕೆ? ಇಲ್ಲಿದೆ ಡೀಟೇಲ್ಸ್.

ಓಲ್ಡ್ ಟ್ರಾಫೋರ್ಡ್(ಜು.04): ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಸೋಲು ಅನುಭವಿಸಿದೆ. ಈ ಮೂಲಕ ಸರಣಿಯಲ್ಲಿ 0-1 ಹಿನ್ನಡೆ ಅನುಭವಿಸಿದೆ. ಆದರೆ ಸೋಲಿನ ಬಳಿಕ ಡ್ರೆಸ್ಸಿಂಗ್ ರೂಮ್‌ಗೆ ತೆರಳಿದ ಇಂಗ್ಲೆಂಡ್ ಕ್ರಿಕೆಟಿಗರು ಕುಣಿದು ಕುಪ್ಪಳಿಸಿದ್ದಾರೆ.

ಭಾರತ ವಿರುದ್ಧದ ಮೊದಲ ಟಿ20 ಪಂದ್ಯದ್ಲಿ ಇಂಗ್ಲೆಂಡ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ವೈಫಲ್ಯ ಅನುಭವಿಸಿತು. ಕುಲದೀಪ್ ಯಾದವ್ ಸ್ಪಿನ್ ಮೋಡಿಗೆ ತತ್ತರಿಸಿದ  ಇಂಗ್ಲೆಂಡ್, ಕೆಎಲ್ ರಾಹುಲ್ ಬ್ಯಾಟಿಂಗ್ ಆರ್ಭಟಕ್ಕೆ ಹೈರಾಣಾಗಿದ್ದರು. ಸೋಲಿನ ಬಳಿಕ ಡ್ರೆಸ್ಸಿಂಗ್ ರೂಂಗೆ ತೆರಳಿದ ಇಂಗ್ಲೆಂಡ್ ತಂಡ ನೇರವಾಗಿ ಸಂಭ್ರಮಾಚರಣೆಯಲ್ಲಿ ತೊಡಗಿದೆ.

 

ಭಾರತ ವಿರುದ್ಧದ ಸೋಲಿನಿಂದ ಬೇಸರಗೊಂಡ ಇಂಗ್ಲೆಂಡ್ ಕ್ರಿಕೆಟಿಗರು ಡ್ರೆಸ್ಸಿಂಗ್ ರೂಂ ಪ್ರವೇಶಿಸುತ್ತಿದ್ದಂತೆ, ಇಂಗ್ಲೆಂಡ್ ಹಾಗೂ ಕೊಲಂಬಿಯಾ ನಡುವಿನ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯ ಅಂತಿಮ ಘಟ್ಟ ತಲುಪಿತ್ತು. 

ಪಂದ್ಯ 1-1 ಡ್ರಾನಲ್ಲಿ ಸಮಭಲ ಸಾಧಿಸಿದ್ದರಿಂದ,  ಪೆನಾಲ್ಟಿ ಶೂಟೌಟ್ ಮೂಲಕ ಇಂಗ್ಲೆಂಡ್ ಗೆಲುವಿನ ನಗೆ ಬೀರಿತು. ಇಂಗ್ಲೆಂಡ್ ರೋಚಕ ಗೆಲುವನ್ನ ಇಂಗ್ಲೆಂಡ್ ಕ್ರಿಕೆಟಿಗರು ಸಂಭ್ರಮಿಸಿದರು. 4-3 ಅಂತರದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸುತ್ತಿದ್ದಂತೆ, ಜೋ ರೂಟ್, ಕ್ರಿಸ್ ಜೋರ್ಡಾನ್, ಮೊಯಿನ್ ಆಲಿ ಸೇರಿದಂತೆ ಇಂಗ್ಲೆಂಡ್ ತಂಡ ಕುಣಿದು ಕುಪ್ಪಳಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ವಿಡಿಯೋದಿಂದ ಸಾರಾ ತೆಂಡೂಲ್ಕರ್ ಟ್ರೋಲ್, ತಂದೆ ಮದ್ಯ ವಿರೋಧಿ ನಿಲುವು ನೆನಪಿಸಿದ ನೆಟ್ಟಿಗರು
ಗಂಭೀರ ಸ್ಥಿತಿಯಲ್ಲಿ ಕೋಮಾಕ್ಕೆ ಜಾರಿದ ಆಸೀಸ್‌ ದಿಗ್ಗಜ ಕ್ರಿಕೆಟರ್‌ ಡೇಮಿಯನ್‌ ಮಾರ್ಟಿನ್‌, ಅಪ್‌ಡೇಟ್‌ ನೀಡಿದ ಗಿಲ್‌ಕ್ರಿಸ್ಟ್‌!