ಆರ್ ಅಶ್ವಿನ್‌ಗೆ ಇಂಜುರಿ-ಕುಲದೀಪ್‌ಗೆ ಸಿಗುತ್ತಾ ಚಾನ್ಸ್?

Published : Jul 27, 2018, 02:36 PM IST
ಆರ್ ಅಶ್ವಿನ್‌ಗೆ ಇಂಜುರಿ-ಕುಲದೀಪ್‌ಗೆ ಸಿಗುತ್ತಾ ಚಾನ್ಸ್?

ಸಾರಾಂಶ

ಟೀಂ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್ ಇಂಜುರಿಗೆ ತುತ್ತಾಗಿದ್ದಾರೆ. ಗಾಯಕ್ಕೆ ತುತ್ತಾಗಿರೋ ಆರ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆಡುತ್ತಾರ? ಅಶ್ವಿನ್ ಬದಲು ಇತರ ಸ್ಪಿನ್ನರ್‌ಗಳಿಗೆ ಅವಕಾಶ ನೀಡ್ತಾರ? ಈ ಎಲ್ಲಾ ಕುತೂಹಲಗಳಿಗೆ ಇಲ್ಲದೆ ಉತ್ತರ.

ಚೆಲ್ಮ್ಸ್‌ಫೋರ್ಡ್(ಜು.27): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತದ ಇಂಜುರಿ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ. ಜಸ್‌ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಇಂಜುರಿ ಬಳಿಕ ಇದೀಗ ಸ್ಪಿನ್ನರ್ ಆರ್ ಅಶ್ವಿನ್ ಕೂಡ ಗಾಯಗೊಂಡಿದ್ದಾರೆ. 

ಅಭ್ಯಾಸ ಪಂದ್ಯದಲ್ಲಿ ಆರ್ ಅಶ್ವಿನ್ ಕೈಗೆ ಗಾಯವಾಗಿದೆ. ಹೀಗಾಗಿ ಅಶ್ವಿನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಗಾಯದ ಲಿಸ್ಟ್ ಬೆಳೆಯುತ್ತಿದೆ. ಇದು ತಂಡದ ಆತಂಕಕ್ಕೆ ಕಾರಣವಾಗಿದೆ. 

ಹಿರಿಯ ಸ್ಪಿನ್ನರ್ ಆರ್ ಅಶ್ವಿನ್ ಇಂಜುರಿ ಗಂಭೀರವಾಗಿಲ್ಲ. ಮೊದಲ ಟೆಸ್ಟ್ ಪಂದ್ಯದ ವೇಳೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ಟೀಂ ಇಂಡಿಯಾ ಫಿಸಿಯೋ ಹೇಳಿದ್ದಾರೆ. ಆದರೆ ಇಂಜುರಿ ಕಾರಣದಿಂದ ಇದೀಗ ಅಶ್ವಿನ್ ಬದಗಿಟ್ಟು ಕುಲದೀಪ್ ಯಾದವ್‌ಗೆ ಅವಕಾಶ ನೀಡಲಾಗುವುದು ಅನ್ನೋ ಮಾತುಗಳು ಕೇಳಿಬಂದಿದೆ.

ಅಭ್ಯಾಸ ಪಂದ್ಯದ ದ್ವಿತೀಯ ದಿನ ಸ್ಪಿನ್ ಕೋಟಾದಲ್ಲಿ ರವೀಂದ್ರ ಜಡೇಜಾ ಕೇವಲ 2 ಓವರ್ ಬೌಲಿಂಗ್
ಮಾಡಿದ್ದು ಯಾವುದೇ ವಿಕೆಟ್ ಪಡೆದಿಲ್ಲ. ಆದರೆ ವೇಗಿಗಳು 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಾಗಿ ಆರ್ ಅಶ್ವಿನ್ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುತ್ತಾರ ಅನ್ನೋ ಕುತೂಹಲ ಮನೆಮಾಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಪ್‌ ತುಳಿತ ತನಿಖಾ ವರದಿ ಹೈಕೋರ್ಟ್‌ ಪರಾಮರ್ಶೆಗೆ
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!