ಭಾರತ-ಇಂಗ್ಲೆಂಡ್ ಟೆಸ್ಟ್: ಅಶ್ವಿನ್-ಕುಲದೀಪ್ ಇಬ್ಬರಿಗೂ ಸಿಗುತ್ತಾ ಚಾನ್ಸ್?

Published : Jul 22, 2018, 03:49 PM IST
ಭಾರತ-ಇಂಗ್ಲೆಂಡ್ ಟೆಸ್ಟ್: ಅಶ್ವಿನ್-ಕುಲದೀಪ್ ಇಬ್ಬರಿಗೂ ಸಿಗುತ್ತಾ ಚಾನ್ಸ್?

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕಾಂಬಿನೇಷನ್ ಹೇಗಿರಬೇಕು? ಪ್ಲೇಯಿಂಗ್ 11ನಲ್ಲಿ ಯಾರು ಇರಬೇಕು ಯಾರಿಗೆ ಅವಕಾಶ ನೀಡಬೇಕು? ಅನ್ನೋ ಚರ್ಚೆ ಶುರುವಾಗಿದೆ. ಹಲವು ಮಾಜಿ ಕ್ರಿಕೆಟಿಗರು ನಾಯಕ ವಿರಾಟ್ ಕೊಹ್ಲಿಗೆ ನೀಡಿದ ಸೂಚನೆ ಏನು? ಇಲ್ಲಿದೆ..

ಲಂಡನ್(ಜು.22): ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಇದೀಗ ತಲೆನೋವು ಶುರುವಾಗಿದೆ. ಪ್ಲೇಯಿಂಗ್ ಇಲೆವೆನ್‌ ಆಯ್ಕೆ ಇದೀಗ ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿಗೆ ಕಗ್ಗಂಟ್ಗಾಗಿದೆ.

ಆಯ್ಕೆ ಚರ್ಚೆ ನಡುವೆ ಭಾರತದ ಮಾಜಿ ಕ್ರಿಕೆಟಿಗರು ಹಲವು ಸೂಚನೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಬ್ಬರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಬೇಕು ಅನ್ನೋ ಆಗ್ರಹ ಕೇಳಿ ಬಂದಿದೆ. ಇದಕ್ಕೆ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

ಆಂಗ್ಲರನ್ನ ಕಟ್ಟಿಹಾಕಲು ಹಿರಿಯ ಸ್ಪಿನ್ನರ್ ಆರ್ ಅಶ್ವಿನ್ ಹಾಗೂ ಯುವ ಸ್ಪಿನ್ನರ್ ಕುಲದೀಪ್ ಯಾದವ್‌ಗೆ ಅವಕಾಶ ನೀಡಬೇಕು ಎಂದು ಅಜರುದ್ದೀನ್ ಹೇಳಿದ್ದಾರೆ. 3 ವೇಗಿಗಳು ಹಾಗೂ 2 ಸ್ಪಿನ್ನರ್ ಕಾಂಬಿನೇಷನ್ ಅತ್ಯುತ್ತಮ ಎಂದು ಅಜರ್ ಸೂಚಿಸಿದ್ದಾರೆ. 

5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಗೆಲುವು ಸಾಧಿಸಲಿದೆ ಎಂದು ಅಜರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಇಂಜುರಿಯಿಂದ ಇಂಗ್ಲೆಂಡ್ ಬೌಲಿಂಗ್ ವಿಭಾಗ ಕಳಪೆಯಾಗಿದೆ. ಹೀಗಾಗಿ ಈ ಅವಕಾಶವನ್ನ ಭಾರತದ ಬ್ಯಾಟ್ಸ್‌ಮನ್‌ಗಳು ಸದುಪಯೋಗ ಪಡಿಸಿಕಕೊಳ್ಳಬೇಕು ಎಂದು ಅಜರ್ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?