
ಲಂಡನ್[ಆ. 18] ಇಂಗ್ಲೆಂಡ್ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿ ಸಾರಾ ಟೇಲರ್ ನಗ್ನ ಫೋಟೊವೊಂದನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಒಳ್ಳೆಯ ಬ್ಯಾಟ್ಸ್ ವುಮನ್ ಹಾಗೂ ವಿಕೆಟ್ ಕೀಪರ್ ಆಗಿರುವ ಸಾರಾ ಕ್ರಿಕೆಟ್ ನಲ್ಲಿ ಸದಾ ಬ್ಯುಸಿ ಇರುತ್ತಾರೆ.
ಪ್ರಸ್ತುತ ಸಾರಾ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಲೀಗ್ ಪಂದ್ಯಗಳಲ್ಲಿ ಸರ್ರೆ ಸ್ಟಾರ್ಸ್ ತಂಡದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಲವಾರು ಸವಾಲುಗಳನ್ನು ಎದುರಿಸಿ ಬಂದಿದ್ದೇನೆ ಎನ್ನುತ್ತ ನಗ್ನ ಪೋಟೋ ಶೂಟ್ ಮಾಡಿಸಿಕೊಂಡಿದ್ದಕ್ಕೆ ಕಾರಣ ನೀಡಿದ್ದಾರೆ.
ಬೆತ್ತಲೆಯಾಗಿ ಬೈಕ್ ಓಡಿಸಿದ ಯುವತಿ ವಿಡಿಯೋ ವೈರಲ್!
ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಖಿನ್ನತೆ ಬಗ್ಗೆ ಮಾತನಾಡಲು ವಿಚಾರ ಸಂಕಿರಣವೊಂದಕ್ಕೆ ನನ್ನನ್ನು ಆಹ್ವಾನಿಸಿದವರಿಗೂ ಧನ್ಯವಾದ ಸಲ್ಲಿಸುತ್ತೇನೆ. ನೆನಪಿಡಿ ಪ್ರತಿಯೊಬ್ಬ ಮಹಿಳೆಯೂ ಸುಂದರಿಯೇ! ಎಂದು ಬರೆದುಕೊಂಡಿದ್ದು ಖಿನ್ನತೆಯಿಂದ ಹೇಗೆ ಹೊರಬರಬೇಕು ಎಂಬುದಕ್ಕೆ ನಮ್ಮಲ್ಲಿ ನಾವು ತೊಡಗಬೇಕು ಎಂದು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.