
ಕೇಪ್‌ಟೌನ್(ಅ.23): ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್ ಧೋನಿ ಕೊಡಗೆ ಏನು ಅನ್ನೋದನ್ನ ಬಿಡಿಸಿ ಹೇಳಬೇಕಾಗಿಲ್ಲ. ಸದ್ಯ ಬ್ಯಾಟಿಂಗ್‌ನಲ್ಲಿ ಕೊಂಚ ಹಿನ್ನಡೆ ಅನುಭವಿಸಿರುವ ಧೋನಿ ಬದಲು ಯುವ ಆಟಗಾರರಿಗೆ ಸ್ಥಾನ ನೀಡಿ ಅನ್ನೋ ಮಾತುಗಳು ಕೇಳಿಬಂದಿತ್ತು. ಇದಕ್ಕೆ ಸೌತ್ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಪ್ರತಿಕ್ರಿಯಿಸಿದ್ದಾರೆ.
ಎಂ.ಎಸ್ ಧೋನಿ ವಿಕೆಟ್ ಕೀಪಿಂಗ್‌ನಲ್ಲಿರೋ ವೇಗ ವಿಶ್ವದ ಯಾವ ವಿಕೆಟ್ ಕೀಪರ್‌ಗೂ ಇಲ್ಲ. ಧೋನಿ ಅನುಭವ, ಡಿಆರ್‌ಎಸ್ ಜಡ್ಜ್‌ಮೆಂಟ್ ಹಾಗೂ ಯುವ ಕ್ರಿಕೆಟಿಗರಿಗೆ ಮೆಂಟರ್ ಆಗಿರುವ ಧೋನಿ ತಂಡಕ್ಕೆ ಅವಶ್ಯಕತೆ ಇದೆ. ಧೋನಿಗೆ 80 ವರ್ಷವಾಗಿ, ವೀಲ್ಹ್‌ಚೇರ್‌ನಲ್ಲಿದ್ದರೂ ನಾನು ಧೋನಿಯನ್ನ ತಂಡದಲ್ಲಿ ಆಡಿಸುವೆ. ಪ್ರತಿ ವರ್ಷ ಪ್ರತಿ ಪಂದ್ಯ ಆಡಿಸುತ್ತೇನೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
ಧೋನಿ ಸ್ಥಾನ ತುಂಬಬಲ್ಲ ಮತ್ತೊಬ್ಬ ಆಟಗಾರನಿಲ್ಲ. ಇಷ್ಟೇ ಅಲ್ಲ ಸದ್ಯ ಟೀಂ ಇಂಡಿಯಾದಲ್ಲಿ ಧೋನಿ ಸ್ಥಾನಕ್ಕೆ ಸೂಕ್ತ ಆಟಗಾರರಿಲ್ಲ. ಹೀಗಾಗಿ ಧೋನಿ ಇನ್ನಷ್ಟು ದಿನ ಟೀಂ ಇಂಡಿಯಾ ಪರ ಕಣಕ್ಕಿಳಿಯಬೇಕು ಎಂದು ಎಬಿಡಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.