ರಿಷಬ್ ಪಂತ್ ಬದಲು ಹೊಸ ವಿಕೆಟ್ ಕೀಪರ್ ಸೂಚಿಸಿದ ಫ್ಯಾನ್ಸ್!

Published : Sep 29, 2019, 03:04 PM IST
ರಿಷಬ್ ಪಂತ್ ಬದಲು ಹೊಸ ವಿಕೆಟ್ ಕೀಪರ್ ಸೂಚಿಸಿದ ಫ್ಯಾನ್ಸ್!

ಸಾರಾಂಶ

ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್‌ ಬದಲು ಹೊಸ ವಿಕೆಟ್ ಕೀಪರ್ ಆಯ್ಕೆ ಮಾಡಲು ಅಭಿಮಾನಿಗಳು ಆಗ್ರಹಿಸಿದ್ದಾರೆ. ಫ್ಯಾನ್ಸ್ ಸೂಚಿಸಿರುವ ಬದಲಿ ವಿಕೆಟ್ ಕೀಪರ್ ಯಾರು? ಇಲ್ಲಿದೆ ವಿವರ.

ಮುಂಬೈ(ಸೆ.29): ಎಂ.ಎಸ್.ಧೋನಿ ಬದಲು ಟೀಂ ಇಂಡಿಯಾ ವಿಕೆಟ್ ಕೀಪರ್ ಜವಬ್ದಾರಿ ವಹಿಸಿಕೊಂಡಿರುವ ರಿಷಬ್ ಪಂತ್ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲೂ ಪಂತ್ ನಿರೀಕ್ಷಿತ ಯಶಸ್ಸು ಸಾಧಿಸಲಿಲ್ಲ. ಇದೀಗ ಟೆಸ್ಟ್ ಸರಣಿಯಲ್ಲಿ ಪಂತ್ ಬದಲು ಇತರ ವಿಕೆಟ್ ಕೀಪರ್‌ಗೆ ಅವಕಾಶ ನೀಡಿ ಅನ್ನೋ ಕೂಗು ಕೇಳಿಬಂದಿದೆ.

ಇದನ್ನೂ ಓದಿ: ಪಂತ್‌ಗೆ ಖಡಕ್‌ ಎಚ್ಚ​ರಿಕೆ ಕೊಟ್ಟ ರವಿ ಶಾಸ್ತ್ರಿ!

ನಿಗಧಿತ ಓವರ್ ಕ್ರಿಕೆಟ್‌ನಲ್ಲಿ ರಿಷಬ್ ಪಂತ್ ಬದಲು ದೇಸಿ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಸಂಜು ಸಾಮ್ಸನ್ ಹಾಗೂ ಇಶಾನ್ ಕಿಶನ್‌ಗೆ ಚಾನ್ಸ್ ನೀಡಲು ಅಭಿಮಾನಿಗಳು ಆಗ್ರಹಿಸಿದ್ದಾರೆ. ಇನ್ನು ಟೆಸ್ಟ್ ಮಾದರಿಯಲ್ಲಿ ವೃದ್ಧಿಮಾನ್ ಸಾಹ ಉತ್ತಮ ಆಯ್ಕೆ. ಪಂತ್ ದೇಸಿ ಪಂದ್ಯದಲ್ಲಿ ಆಡಿ ಸಾಮರ್ಥ್ಯ ಸಾಬೀತು ಪಡಿಸಲಿ ಎಂದು ಸೂಚಿಸಿದ್ದಾರೆ.  

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!