
ರಾಜ್‌ಕೋಟ್(ಅ.04): ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಸೆಕ್ಯೂರಿಟಿ ಗಾರ್ಡ್ ಕಣ್ತಪ್ಪಿಸಿ ಅಭಿಮಾನಿಗಳು ಕ್ರೀಸ್‌ಗೆ ನುಗ್ಗಿದ ಘಟನೆ ನಡೆದಿದೆ. ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಅಭಿಮಾನಿಗಳು ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಲು ಈ ರೀತಿ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಬ್ಯಾಟಿಂಗ್ ಪ್ರದರ್ಶನದ ನಡುವೆ ಇಬ್ಬರು ಅಭಿಮಾನಿಗಳು ನೇರವಾಗಿ ಕ್ರೀಸ್‌ಗೆ ನುಗ್ಗಿದ್ದಾರೆ. ಇಷ್ಟೇ ಅಲ್ಲ ನಾಯಕ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಲು ಮನವಿ ಮಾಡಿದ್ದಾರೆ. ವಿಶೇಷ ಅಂದರೆ ಕೊಹ್ಲಿ ಇವರ ಬೇಡಿಕೆಯನ್ನ ನಿರಾಕರಿಸಲಿಲ್ಲ. ಪಂದ್ಯದ ನಡುವೆಯೇ ಅಭಿಮಾನಿಗಳ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಅಭಿಮಾನಿಗಳು ಒಂದೆಡೆರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಂತೆ ಸೆಕ್ಯೂರಿಟಿ ಗಾರ್ಡ್ ತಕ್ಷಣವೇ ಮೈದಾನಕ್ಕೆ ಧಾವಿಸಿದರು. ಇಷ್ಟೇ ಅಲ್ಲ ಇಬ್ಬರು ಅಭಿಮಾನಿಗಳನ್ನ ವಶಕ್ಕೆ ಪಡೆದರು. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಈ ರೀತಿ ಮೈದಾನಕ್ಕೆ ನುಗ್ಗುತ್ತಿರುವುದು ಇದೇ ಮೊದಲಲ್ಲ. ಸಚಿನ್ ತೆಂಡೂಲ್ಕರ್, ಎಂ.ಎಸ್ ಧೋನಿ, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್ ಸೇರಿದಂತೆ ಹಲವು ಕ್ರಿಕೆಟಿಗರು ಇದೇ ರೀತಿ ಅನುಭವ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.