INDvWI; ಏಕದಿನದಿಂದ ಮಯಾಂಕ್ ಔಟ್; ಆಯ್ಕೆ ಸಮಿತಿಗೆ ಮತ್ತೆ ಕ್ಲಾಸ್!

Published : Jul 21, 2019, 07:39 PM ISTUpdated : Jul 21, 2019, 07:58 PM IST
INDvWI; ಏಕದಿನದಿಂದ ಮಯಾಂಕ್ ಔಟ್; ಆಯ್ಕೆ ಸಮಿತಿಗೆ ಮತ್ತೆ ಕ್ಲಾಸ್!

ಸಾರಾಂಶ

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ವಿಶ್ವಕಪ್ ಟೂರ್ನಿಯಲ್ಲಿ ಆಯ್ಕೆ ಸಮಿತಿ ಆಯ್ಕೆಗಗಳು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಅದೇ ಎಡವಟ್ಟು ಮಾಡಿದೆ ಅನ್ನೋ ಆರೋಪಗಳು ಕೇಳಿ ಬಂದಿದೆ. 

ಮುಂಬೈ(ಜು.21): ವಿಶ್ವಕಪ್ ಟೂರ್ನಿ ಬಳಿಕ ವಿಶ್ರಾಂತಿಗೆ ಜಾರಿರುವ ಟೀಂ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಸಜ್ಜಾಗಿದೆ. ಎಂ.ಎಸ್.ಕೆ.ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ವಿಂಡೀಸ್ ಪ್ರವಾಸಕ್ಕೆ ತಂಡ ಆಯ್ಕೆ ಮಾಡಿದೆ. 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯದ ಸರಣಿಗೆ ತಂಡ ಆಯ್ಕೆ ಮಾಡಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರೆ, ಏಕದಿನ ತಂಡದಿಂದ ಕಡೆಗಣಿಸಲಾಗಿದೆ. ಇದು ಹೊಸ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಮೂರು ಕನ್ನಡಿಗರಿಗೆ ಸ್ಥಾನ

ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಏಕದಿನದಲ್ಲಿ ಸ್ಥಾನ ನೀಡದಿರುವುದನ್ನು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬದಲಿ ಆಟಗಾರನಾಗಿ ಮಯಾಂಕ್ ಅಗರ್ವಾಲ್‌ಗೆ ಅವಕಾಶ ನೀಡಲಾಗಿತ್ತು. ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ನೀಡಿದ್ದ ಆಯ್ಕೆ ಸಮಿತಿ ಇದೀಗ ವೆಸ್ಟ್ ಇಂಡೀಸ್ ಪ್ರವಾಸದಿಂದ ಹೊರಗಿಟ್ಟಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಯುಡು 3D ಟ್ವೀಟ್‌ಗೆ ಮೊದಲ ಪ್ರತಿಕ್ರಿಯೆ ನೀಡಿದ ಆಯ್ಕೆ ಸಮಿತಿ!

ವಿಶ್ವಕಪ್ ಟೂರ್ನಿಯಲ್ಲಿ ಆಲ್ರೌಂಡರ್ ವಿಜಯ್ ಶಂಕರ್ ಇಂಜುರಿಗೆ ತುತ್ತಾದಾಗ ಮಯಾಂಕ್ ಅಗರ್ವಾಲ್ ಆಯ್ಕೆ ಮಾಡಲಾಗಿತ್ತು. ಮಯಾಂಕ್ ತಂಡ ಸೇರಿಕೊಂಡರೂ ಆಡೋ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ವಿಶ್ವಕಪ್ ತಂಡಕ್ಕೆ ಆಯ್ಕೆಯಾಗೋ ಪ್ರತಿಭೆ ಇರುವ ಮಯಾಂಕ್‌ಗೆ, ವಿಂಡೀಸ್ ಪ್ರವಾಸ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್