
ಕಿಂಗ್ಸ್‌ಸ್ಟನ್(ಸೆ.05): ಹೆಜ್ಜೆ ಹೆಜ್ಜೆಗೂ ಟ್ರೋಲ್ ಆಗುತ್ತಿರುವ ವ್ಯಕ್ತಿಗಳಲ್ಲಿ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಮೊದಲ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ರವಿ ಶಾಸ್ತ್ರಿ ಬೀಚ್ ಬದಿಯಲ್ಲಿನ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದೇ ಫೋಟೋವನ್ನು ಎಡಿಟ್ ಮಾಡಿದ ಟ್ರೋಲಿಗರು ಕೈಯಲ್ಲಿ ಮದ್ಯದ ಬಾಟಲಿ ಹಿಡಿದಿರುವ ಶಾಸ್ತ್ರಿ ಫೋಟೋವನ್ನು ಹಾಕಿ ಟ್ರೋಲ್ ಮಾಡಲಾಗಿತ್ತು. ಇದೀಗ ಹಳೇ ಟ್ರೋಲಿಗೆ ತಿರುಗೇಟು ನೀಡಲು ಹೋದ ಶಾಸ್ತ್ರಿಗೆ ಮತ್ತೆ ಟ್ವಿಟರಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಕೆರಿಬಿಯನ್ ಬೀಚ್‌ನಲ್ಲಿ ಶಾಸ್ತ್ರಿ ರಿಲ್ಯಾಕ್ಸ್; ಮತ್ತೆ ಟ್ರೋಲ್ ಮಾಡಿದ ಫ್ಯಾನ್ಸ್!
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ರವಿ ಶಾಸ್ತ್ರಿ ಬೀಚ್ ಬದಿಯಲ್ಲಿನ ಫೋಟೋ ಅಪ್‌ಲೋಡ್ ಮಾಡಿದ್ದಾರೆ. ಸೂರ್ಯನ ಕಿರಣ ಸ್ಪರ್ಶಿಸಿರುವ ಜಮೈಕಾ, ನನ್ನ ಎಡಗೈಯಲ್ಲಿ ಮಧುರ ಪಾನಕ ಎಂದು ರವಿ ಶಾಸ್ತ್ರಿ ಟ್ವೀಟ್ ಮಾಡಿದ್ದಾರೆ. ಶಾಸ್ತ್ರಿ ಈ ಪೋಟೋ ಅಪ್‌ಲೋಡ್ ಮಾಡುತ್ತಿದ್ದಂತೆ ಟ್ವಿಟರಿಗರು ಮತ್ತೆ ಟ್ರೋಲ್ ಮಾಡಿದ್ದಾರೆ.
ಸೆ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.