ಫಿಫಾ ಸೆಮಿಫೈನಲ್ :ಸಚಿನ್ ತೆಂಡೂಲ್ಕರ್ ಬೆಂಬಲ ಯಾರಿಗೆ?

Published : Jul 11, 2018, 02:22 PM ISTUpdated : Jul 11, 2018, 02:29 PM IST
ಫಿಫಾ ಸೆಮಿಫೈನಲ್ :ಸಚಿನ್ ತೆಂಡೂಲ್ಕರ್ ಬೆಂಬಲ ಯಾರಿಗೆ?

ಸಾರಾಂಶ

ಫಿಫಾ ವಿಶ್ವಕಪ್ ಟೂರ್ನಿ ಅಂತಿಮ ಘಟ್ಟ ತಲುಪಿದೆ. ಇಂದು ನಡೆಯಲಿರುವ 2ನೇ ಸೆಮಿಫೈನಲ್ ಪಂದ್ಯದಲ್ಲಿ ಯಾರು ಗೆಲ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಇದರ ನಡುವೆ ಸಚಿನ್ ತೆಂಡೂಲ್ಕರ್ ತಮ್ಮ ನೆಚ್ಚಿನ ತಂಡಕ್ಕೆ ಬೆಂಬಲ ಸೂಚಿಸೋ ವೀಡಿಯೋ ಬಿಡುಗಡೆ ಮಾಡಿದ್ದಾರೆ. ಸಚಿನ್ ವೀಡಿಯೋ ಹೇಗಿದೆ? ಇಲ್ಲಿದೆ. 

ಮುಂಬೈ(ಜು.11): ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕ್ರಿಕೆಟ್ ಜೊತೆಗೆ ಇತರ ಕ್ರೀಡೆಗಳಿಗೂ ಪ್ರೋತ್ಸಾಹ ನೀಡುತ್ತಾರೆ. ಅದರಲ್ಲೂ ಈ ಬಾರಿಯ ಫಿಫಾ ವಿಶ್ವಕಪ್ ಟೂರ್ನಿಯನ್ನ ಫಾಲೋ ಮಾಡುತ್ತಿರುವ ಸಚಿನ್ ಇದೀಗ 2ನೇ ಸೆಮಿಫೈನಲ್ ಮುಖಾಮುಖಿಯಲ್ಲಿ ತಮ್ಮ ನೆಚ್ಚಿನ ತಂಡವನ್ನ ಬೆಂಬಲಿಸಿದ್ದಾರೆ.

ಫಿಫಾ ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗು ಕ್ರೊವೇಷಿಯಾ ಹೋರಾಟ ನಡೆಸಲಿದೆ. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಇಂಗ್ಲೆಂಡ್ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

 

 

ಸಚಿನ್ ಇಂಗ್ಲೆಂಡ್ ತಂಡಕ್ಕೆ ಬೆಂಬಲ ಸೂಚಿಸಿರೋ ವೀಡಿಯೋ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಚಿನ್ ಫುಟ್ಬಾಲ್ ಸ್ಕಿಲ್ಸ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಫುಟ್ಬಾಲ್‍‌ಗೆ ಕಿಕ್ ಮಾಡೋ ಮೂಲಕ ಕಮಾನ್ ಇಂಗ್ಲೆಂಡ್ ಎಂದಿರುವ ಸಚಿನ್ ತಮ್ಮ ಬೆಂಬಲ ಇಂಗ್ಲೆಂಡ್ ತಂಡಕ್ಕೆ ಎಂದಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಭೇಟಿ ವೇಳೆ ಕೋಲ್ಕತಾದಲ್ಲಿ ರಾದ್ಧಾಂತ: ಆಟಗಾರನ ಕಣ್ತುಂಬಿಕೊಳ್ಳಲು ಆಗದ್ದಕ್ಕೆ ಅಭಿಮಾನಿಗಳ ಆಕ್ರೋಶ
ಆರ್‌ಸಿಬಿ ಕಾಲ್ತುಳಿತದ ದುರ್ಘಟನೆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.24ಕ್ಕೆ ಮೊದಲ ಕ್ರಿಕೆಟ್‌ ಪಂದ್ಯ? ಕೊಹ್ಲಿ ಭಾಗಿ