
ಮಾಸ್ಕೋ(ಜು.02): ಫಿಫಾ ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಡೆನ್ಮಾರ್ಕ್ ತಂಡವನ್ನ ಪೆನಾಲ್ಟಿ ಶೂಟೌಟ್ ಮೂಲಕ ಮಣಿಸಿದ ಕ್ರೊವೇಷಿಯಾ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಮೂಲಕ 1998ರ ಬಳಿಕ ಇದೇ ಮೊದಲ ಬಾರಿಗೆ ಕ್ರೊವೇಷಿಯಾ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
ರೋಚಕ ಹೋರಾಟ 1-1 ಗೋಲುಗಳ ಅಂತರದಲ್ಲಿ ಸಮಭಗೊಂಡಿತು. ಹೀಗಾಗಿ ಪೆನಾಲ್ಟಿ ಶೂಟೌಟ್ ಮೂಲಕ ಫಲಿತಾಂಶ ನಿರ್ಧಾರಿಸಲಾಯಿತು. ಕ್ರೊವೇಷಿಯಾ ಗೋಲು ಕೀಪರ್ ದನಿಜೆಲ್ ಸುಬಾಸಿಕ್ ಮಾಡಿದ ಅದ್ಬುತ ಸೇವ್ ತಂಡದ ಗೆಲುವಿಗೆ ಕಾರಣವಾಯಿತು.
ದನಿಜೆಲ್ ಸುಬಾಸಿಕ್ 3 ಪೆನಾಲ್ಟಿ ಶೂಟೌಟ್ ತಡೆಯೋ ಮೂಲಕ ಕ್ರೊವೇಷಿಯಾ ತಂಡಕ್ಕೆ 3-2 ಅಂತರದ ಗೆಲುವು ತಂದುಕೊಟ್ಟರು. ಈ ಮೂಲಕ ಡೆನ್ಮಾರ್ಕ್ ವಿರೋಚಿತ ಸೋಲು ಅನುಭವಿಸಿದರೆ, ಕ್ರೊವೇಷಿಯಾ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.