
ಬೆಂಗಳೂರು: 1938ರ ಬಳಿಕ ವಿಶ್ವ ಮಹಾಯುದ್ಧ ಕಾರಣ 1942, 1946ರಲ್ಲಿ ವಿಶ್ವಕಪ್ ಫುಟ್ಬಾಲ್ ನಡೆಯಲಿಲ್ಲ. 4ನೇ ಫಿಫಾ ಫುಟ್ಬಾಲ್ ವಿಶ್ವಕಪ್ ನಡೆದಿದ್ದು 1950ರಲ್ಲಿ. ಆತಿಥ್ಯ ವಹಿಸುವ ಹಕ್ಕು ಪಡೆದಿದ್ದು ಬ್ರೆಜಿಲ್. 13 ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು. 6 ನಗರಗಳು ಪಂದ್ಯಗಳಿಗೆ ವೇದಿಕೆ ಒದಗಿಸಿದ್ದವು. ಟೂರ್ನಿಯಲ್ಲಿ ಒಟ್ಟು 22 ಪಂದ್ಯಗಳು ನಡೆದವು. ಪಂದ್ಯದಲ್ಲಿ ಸರಾಸರಿ 4ರಂತೆ ಟೂರ್ನಿಯಲ್ಲಿ ಬರೋಬ್ಬರಿ 88 ಗೋಲುಗಳು ದಾಖಲಾದವು.
ಬಹಳ ವಿಶೇಷ ಎಂದರೆ ಭಾರತಕ್ಕೆ ಈ ವಿಶ್ವಕಪ್‌ನಲ್ಲಿ ಆಡಲು ಅರ್ಹತೆ ದೊರೆತಿತ್ತು. ಫಿಫಾ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರೂ,ಪ್ರಯಾಣ ವೆಚ್ಚ ಭರಿಸಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಭಾರತ ಟೂರ್ನಿಯಿಂದ ಹಿಂದೆ ಸರಿದಿತ್ತು. ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿತ್ತು. ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಉರುಗ್ವೆ, ಬ್ರೆಜಿಲ್,ಸ್ವೀಡನ್ ಹಾಗೂ ಸ್ಪೇನ್ ತಂಡಗಳು ಫೈನಲ್ ಹಂತಕ್ಕೇರಿದವು. ಈ ಬಾರಿ ಟೂರ್ನಿ ಮಾದರಿಯಲ್ಲಿ ಬದಲಾವಣೆ ಮಾಡಲಾಗಿತ್ತು. ಫೈನಲ್ ಹಂತದಲ್ಲಿ ನಾಲ್ಕು ತಂಡಗಳು ಪರಸ್ಪರ ಮುಖಾಮುಖಿಯಾದವು. ಅತಿಹೆಚ್ಚು ಅಂಕ ಗಳಿಸಿದ ಉರುಗ್ವೆ 2ನೇ ಬಾರಿ ಚಾಂಪಿಯನ್ ಆಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.