ಕೊನೆಗೂ ಕತ್ರಿನಾ ಕೈಫ್ ಭೇಟಿಯಾದ ಮೊಹಮ್ಮದ್ ಕೈಫ್!

Published : Jun 05, 2019, 03:30 PM IST
ಕೊನೆಗೂ ಕತ್ರಿನಾ ಕೈಫ್ ಭೇಟಿಯಾದ ಮೊಹಮ್ಮದ್ ಕೈಫ್!

ಸಾರಾಂಶ

ಕ್ರಿಕೆಟಿಗ ಮೊಹಮ್ಮದ್ ಕೈಫ್ ಹಾಗೂ ಬಾಲಿವುಡ್ ನಟಿ ಕತ್ರಿನಾ ಕೈಫ್ ಕೊನೆಗೂ ಭೇಟಿಯಾಗಿದ್ದಾರೆ. ಕತ್ರಿನಾ ಜೊತೆಗೆ ಫೋಟೋ ತೆಗೆಸಿಸಿಕೊಂಡಿರುವ ಕೈಫ್, ಸಂದೇಶವನ್ನು ರವಾನಿಸಿದ್ದಾರೆ.  

ಮುಂಬೈ(ಜೂ.05): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಬಾರಿ ಚರ್ಚೆಯಾಗಿದ್ದಾರೆ. ಅದರಲ್ಲೂ ಕೈಫ್ ಸರ್‌ನೇಮ್ ಟ್ವಿಟರಿಗರ ಕುತೂಹಲಕ್ಕೆ ಕಾರಣವಾಗಿದೆ. ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ಮೊಹಮ್ಮದ್ ಕೈಫ್ ಇಬ್ಬರೂ ಒಂದೇ ಸರ್‌ನೇಮ್ ಹೀಗಾಗಿ, ಟ್ವಿಟರಿಗರಿಗೆ ಆಹಾರವಾಗಿದ್ದರು. ಸುದೀರ್ಘ ವರ್ಷಗಳ ಬಳಿಕ ಕೊನೆಗೂ ಮೊಹಮ್ಮದ್ ಕೈಫ್ ಹಾಗೂ ಕತ್ರಿನಾ ಕೈಫ್ ಭೇಟಿಯಾಗಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಟೀಂ ಇಂಡಿಯಾ ಹೆಜ್ಜೆಗುರುತು

ಕತ್ರಿನಾ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿರುವ ಮೊಹಮ್ಮದ್ ಕೈಫ್, ನಮ್ಮಿಬ್ಬರ ನಡುವೆ ಯಾವುದೇ ಸಂಬಂಧವಿಲ್ಲ, ಗೆಳೆತನ ಹೊರತುಪಡಿಸಿ ಎಂದು ಟ್ವೀಟ್ ಮಾಡಿದ್ದಾರೆ. ಕೈಫ್ ಟ್ವೀಟ್‌ಗೆ ಕೆಲವರು ಮೊಹಮ್ಮದ್ ಕತ್ರಿನಾ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

 

 

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಇಂಗ್ಲೆಂಡ್‌ಗೆ ಮತ್ತೊಂದು ಶಾಕ್!

ವಿಶ್ವಕಪ್ ಟೂರ್ನಿ ಹಾಗೂ ಟೀಂ ಇಂಡಿಯಾ ಮಾತುಕತೆಯಲ್ಲಿ ಭಾಗವಹಿಸಿದ್ದ ವೇಳೆ ಮೊಹಮ್ಮದ್ ಕೈಫ್ ಹಾಗೂ ಕತ್ರಿನಾ ಕೈಫ್ ಭೇಟಿಯಾಗಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಕೈಫ್ ಭೇಟಿ ಸದ್ದು ಮಾಡುತ್ತಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಚಿನ್ ತೆಂಡೂಲ್ಕರ್ ಮತ್ತೊಂದು ದಾಖಲೆ ನುಚ್ಚುನೂರು; ಕೇವಲ 521 ಇನ್ನಿಂಗ್ಸ್‌ನಲ್ಲೇ ಹೊಸ ದಾಖಲೆ ಬರೆದ ಜೋ ರೂಟ್..! ಆದ್ರೂ ಕೊಹ್ಲಿ ರೆಕಾರ್ಡ್ ಸೇಫ್
BCCI Chief Selector: ಅಜಿತ್ ಅಗರ್ಕರ್ ರಾಜೀನಾಮೆ ಖಚಿತ..! ಹೊಸ ಅಪ್‌ಡೇಟ್ ಕೊಟ್ಟ ಬಿಸಿಸಿಐ, ಯಾರಾಗ್ತಾರೆ ಮುಂದಿನ ಚೀಫ್ ಸೆಲೆಕ್ಟರ್?