
ನವದೆಹಲಿ(ಡಿ.31): ಕುಸ್ತಿಪಟು ಪ್ರವೀಣ್ ರಾಣಾ ಬೆಂಬಲಿಗರ ಜತೆ ಕಾದಾಟ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಅವರ ಬೆಂಬಲಿಗರ ವಿರುದ್ಧ ಎಫ್'ಐಆರ್ ದಾಖಲಾಗಿದೆ.
ಶುಕ್ರವಾರ ಇಲ್ಲಿ ಕಾಮನ್'ವೆಲ್ತ್ ಗೇಮ್ಸ್'ಗಾಗಿ ನಡೆದ ಆಯ್ಕೆ ಟ್ರಯಲ್ಸ್ ವೇಳೆ ಸುಶೀಲ್ ಹಾಗೂ ಪ್ರವೀಣ್ ಬೆಂಬಲಿಗರ ನಡುವೆ ಕಿತ್ತಾಟ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಪಿಸಿ ಸೆಕ್ಷನ್ 341, 323 ಅಡಿಯಲ್ಲಿ ವಿರುದ್ಧ ದೂರು ದಾಖಲಿಸಲಾಗಿದೆ.
ನಾನು 15 ವರ್ಷಗಳಿಂದ ಛತ್ತಾಸಾಲ್ ಸ್ಟೇಡಿಯಂನಲ್ಲಿ ತರಬೇತಿ ಪಡೆಯುತ್ತಿದ್ದೇನೆ. ನನಗೆ ಎಲ್ಲರ ಮುಖ ಪರಿಚಯವಿದೆ. ನನ್ನ ಹಾಗೂ ನನ್ನ ಸಹೋದರರ ಮೇಲೆ ಹಲ್ಲೆ ಮಾಡಿದವರ ಮುಖ ಚಹರೆ ಪತ್ತೆಹಚ್ಚಬಲ್ಲೆ ಎಂದು ರಾಣಾ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.