ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಇನ್ನಿಲ್ಲ..!

Published : Mar 27, 2019, 11:21 PM IST
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಇನ್ನಿಲ್ಲ..!

ಸಾರಾಂಶ

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಹಾಗೂ ಶ್ರೀಲಂಕಾ ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದ ಬ್ರೂಸ್ ಯಾರ್ಡ್ಲಿ ನಿಧನರಾಗಿದ್ದಾರೆ. ಖ್ಯಾತ ವೀಕ್ಷಕ ವಿವರಣೆಗಾರರಾಗಿಯೂ ಖ್ಯಾತರಾಗಿದ್ದ ಯಾರ್ಡ್ಲಿ ನಿಧನಕ್ಕೆ ಲಂಕಾ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕರ ಸಂತಾಪ ಸೂಚಿಸಿದ್ದಾರೆ.  

ಸಿಡ್ನಿ[ಮಾ.27]: ಆಸ್ಟ್ರೇಲಿಯಾ ಮಾಜಿ ಟೆಸ್ಟ್ ಕ್ರಿಕೆಟಿಗ, ಕೋಚ್ ಹಾಗೂ ವೀಕ್ಷಕ ವಿವರಣೆಗಾರರಾಗಿ ಖ್ಯಾತರಾಗಿದ್ದ ಬ್ರೂಸ್ ಯಾರ್ಡ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್’ನೊಂದಿಗೆ ಸೆಣೆಸುತ್ತಿದ್ದ ಯಾರ್ಡ್ಲಿ ತಮ್ಮ 71ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

30ನೇ ವಯಸ್ಸಿಗೆ ಆಸ್ಟ್ರೇಲಿಯಾ ತಂಡಕ್ಕೆ ಪದಾರ್ಪಣೆ ಮಾಡಿದ್ದ ಯಾರ್ಡ್ಲಿ, 33 ಟೆಸ್ಟ್ ಪಂದ್ಯಗಳನ್ನಾಡಿ 126 ವಿಕೆಟ್ ಕಬಳಿಸಿದ್ದರು. ಮಧ್ಯಮವೇಗಿಯಾಗಿ ತಂಡ ಸೇರಿದ್ದ ಯಾರ್ಡ್ಲಿ ಆ ಬಳಿಕ ಆಫ್ ಸ್ಪಿನ್ನರ್ ಆಗಿ ಬದಲಾಗಿದ್ದರು. ಇನ್ನು ಪ್ರಥಮ ದರ್ಜೆ ಕ್ರಿಕೆಟ್’ನಲ್ಲಿ ಯಾರ್ಡ್ಲಿ 344 ವಿಕೆಟ್ ಕಬಳಿಸಿ ಮಿಂಚಿದ್ದರು. 

ಇನ್ನು 1996ರಿಂದ 1998ರ ಅವಧಿಯಲ್ಲಿ ಶ್ರೀಲಂಕಾ ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಮುತ್ತಯ್ಯಾ ಮುರುಳೀಧರನ್ ಬೌಲಿಂಗ್ ಶೈಲಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಯಾರ್ಡ್ಲಿ ನಿಧನಕ್ಕೆ ಶ್ರೀಲಂಕಾ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕರ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
29 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಕ್ವಾಷ್‌ ವಿಶ್ವಕಪ್‌ ಗೆದ್ದ ಭಾರತ!