NCA ಮುಖ್ಯಸ್ಥರಾಗಿ ರಾಹುಲ್‌ ದ್ರಾವಿಡ್‌ ನೇಮಕ

By Web DeskFirst Published Jul 9, 2019, 1:15 PM IST
Highlights

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕಿರಿಯರ ತಂಡದ ಕೋಚ್ ರಾಹುಲ್ ದ್ರಾವಿಡ್ ಇದೀಗ NCA(National Cricket Academy) ಮುಖ್ಯಸ್ಥರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಮುಂಬೈ(ಜು.09): ಭಾರತ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ರನ್ನು ಬಿಸಿಸಿಐ, ಸೋಮವಾರ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥರಾಗಿ ನೇಮಕ ಮಾಡಿದೆ.

ಕೋಚ್ ಜತೆಗೆ ದ್ರಾವಿಡ್‌ಗೆ ಹೊಸ ಜವಾಬ್ದಾರಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿರುವ ಎನ್‌ಸಿಎನಲ್ಲಿ ದ್ರಾವಿಡ್‌ ಕಾರ್ಯ ನಿರ್ವಹಿಸಲಿದ್ದಾರೆ. ಆಟಗಾರರು, ಕೋಚ್‌ಗಳಿಗೆ ಮಾರ್ಗದರ್ಶನ, ತರಬೇತಿ, ಸ್ಫೂರ್ತಿ ತುಂಬುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿರುವ ದ್ರಾವಿಡ್‌, ರಾಷ್ಟ್ರೀಯ ಪುರುಷ ಹಾಗೂ ಮಹಿಳಾ ತಂಡಗಳ ಪ್ರಧಾನ ಕೋಚ್‌ಗಳ ಜತೆಯೂ ನಿರಂತರ ಸಂಪರ್ಕದಲ್ಲಿರಲಿದ್ದಾರೆ. 

ಭಾರತ ‘ಎ’, ಅಂಡರ್‌-19, ಅಂಡರ್‌-23 ತಂಡಗಳ ಪ್ರದರ್ಶನದ ಮೇಲೂ ದ್ರಾವಿಡ್‌ ಕಣ್ಣಿಡಲಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ರಾಹುಲ್ ದ್ರಾವಿಡ್ ಮಾರ್ಗದರ್ಶನಲ್ಲಿ ಭಾರತದ ಕಿರಿಯರ ತಂಡ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 
 

click me!