
ಕೋಲ್ಕತಾ(ಸೆ.18): ರವಿಶಾಸ್ತ್ರಿ ಗುತ್ತಿಗೆ ಮುಕ್ತಾಯಗೊಂಡ ಬಳಿಕ ಭಾರತ ತಂಡದ ಕೋಚ್ ಆಗುವ ಬಗ್ಗೆ ಯೋಚಿಸುತ್ತೇನೆ ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. ಮಂಗಳವಾರ ಇಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಂಗೂಲಿ, ‘ಭಾರತ ತಂಡದ ಕೋಚ್ ಆಗುವ ಆಸಕ್ತಿ ಖಂಡಿತವಾಗಿಯೂ ಇದೆ. ಆದರೆ ಒಬ್ಬ ಕೋಚ್ ಗುತ್ತಿಗೆ ಮುಕ್ತಾಯಗೊಳ್ಳಲಿ, ಆ ಬಳಿಕ ಯೋಚಿಸುತ್ತೇನೆ’ ಎಂದರು.
ಟೀಂ ಇಂಡಿಯಾ ಖ್ಯಾತ ಕ್ರಿಕೆಟಿಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ
ನಾನು ಈಗಾಗಲೇ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಿದ್ದೇನೆ. ನಮ್ಮ ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. 7 ವರ್ಷಗಳ ಬಳಿಕ ಮೊದಲ ಬಾರಿಗೆ ಡೆಲ್ಲಿ ತಂಡ ಸೆಮಿಫೈನಲ್ ಪ್ರವೇಶಿಸಿತ್ತು ಎಂದು ದಾದಾ ಹೇಳಿದ್ದಾರೆ.
ಸೌರವ್ ಗಂಗೂಲಿಗೆ ಮತ್ತೆ ಸ್ವಹಿತಾಸಕ್ತಿ ಸಂಕಷ್ಟ!
ಇನ್ನು ಧೋನಿ ನಿವೃತ್ತಿಯ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗಂಗೂಲಿ, ಆಯ್ಕೆಗಾರರ ಮನಸ್ಸಿನಲ್ಲಿ ಏನಿದೆ, ಕೊಹ್ಲಿ ಏನು ಯೋಚನೆ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಎಂ.ಎಸ್. ಧೋನಿ ನಿವೃತ್ತಿ ವಿಚಾರವನ್ನು ಅವರ ಪಾಡಿಗೆ ಬಿಡುವುದೇ ಒಳ್ಳೆಯದು ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್‌ಗೆ ಅಶ್ವಿನ್ ಸೇರ್ಪಡೆಯಾದರೆ ಸಂತೋಷ ಎಂದ ಗಂಗೂಲಿ
ಮತ್ತೊಂದು ಅವಧಿಗೆ ಕೋಚ್ ಆಗಿ ಆಯ್ಕೆಯಾಗಿರುವ ರವಿಶಾಸ್ತ್ರಿ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭವನ್ನೇ ಪಡೆದಿದೆ. ವೆಸ್ಟ್ ಇಂಡೀಸ್ ಪ್ರವಾಸವನ್ನು ವಿರಾಟ್ ಪಡೆ ಸೋಲಿಲ್ಲದೇ ಸರಣಿ ಜಯಿಸಿ ತವರಿಗೆ ಮರಳಿದೆ. ಇದೀಗ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಹಾಗೂ ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯವನ್ನಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.