
ಚೆನ್ನೈ(ಜು.29): ತಮಿಳುನಾಡು ಫುಟ್ಬಾಲ್ ತಂಡದ ಮಾಜಿ ನಾಯಕ ಕಾಲಿಯಾ ಕುಲೊತುಂಗನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ಶನಿವಾರ ತಿಳಿಸಿವೆ. ಸಂತೋಷ್ ಟ್ರೋಫಿ ಟೂರ್ನಿಯಲ್ಲಿ ತಮಿಳುನಾಡು ತಂಡದ ಪರ ಆಡಿದ್ದ ಕಾಲಿಯಾ, ದೇಶಿಯ ಲೀಗ್ ಟೂರ್ನಿಗಳಲ್ಲಿ ಮುಂಬೈ ಎಫ್‌ಸಿ ಮತ್ತು ಈಸ್ಟ್ ಬೆಂಗಾಲ್ ತಂಡದ ಪರ ಆಡಿದ್ದರು.
ಕಾಲಿಯಾ ಅವರ ಅಕಾಲಿಕ ಮರಣಕ್ಕೆ, ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ, ಮಾಜಿ ನಾಯಕ ಐಎಮ್ ವಿಜಯನ್, ಬೈಚುಂಗ್ ಭುಟಿಯಾ ಸೇರಿದಂತೆ ಹಲವು ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
2003ರಲ್ಲಿ ಈಸ್ಟ್ ಬೆಂಗಾಲ್ ತಂಡದ ಪರ ಮಿಂಚಿನ ಪ್ರದರ್ಶನ ನೀಡಿದ ಕಾಲಿಯಾ, ಏಷ್ಯನ್ ಚಾಂಪಿಯನ್ಸ್ ಟ್ರೋಪಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ತಮಿಳುನಾಡಿನ ತಂಜಾವೂರಿನಲ್ಲಿ ಹುಟ್ಟಿದ ಕಾಲಿಯಾ, 40ನೇ ವಯಸ್ಸಿನಲ್ಲಿ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.