ಟೀಂ ಇಂಡಿಯಾದ ಹಿರಿಯ ಬ್ಯಾಟ್ಸ್’ಮನ್ ಕ್ರಿಕೆಟ್’ಗೆ ಗುಡ್’ಬೈ

Published : Sep 01, 2018, 11:19 AM ISTUpdated : Sep 09, 2018, 09:58 PM IST
ಟೀಂ ಇಂಡಿಯಾದ ಹಿರಿಯ ಬ್ಯಾಟ್ಸ್’ಮನ್ ಕ್ರಿಕೆಟ್’ಗೆ ಗುಡ್’ಬೈ

ಸಾರಾಂಶ

ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಬದರೀನಾಥ್ ಹೇಳಿದ್ದಾರೆ.

ಚೆನ್ನೈ[ಸೆ.01]: ಭಾರತದ ಮಾಜಿ ಕ್ರಿಕೆಟಿಗ ಸುಬ್ರಮಣಿಯನ್ ಬದರೀನಾಥ್, ಶುಕ್ರವಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ತಮಿಳುನಾಡಿನ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಬದರಿನಾಥ್ ಭಾರತ ಪರ 2 ಟೆಸ್ಟ್, 7 ಏಕದಿನ ಮತ್ತು ಒಂದು ಟಿ20 ಪಂದ್ಯಗಳನ್ನಾಡಿದ್ದಾರೆ. 

ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಬದರೀನಾಥ್ ಹೇಳಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಬದರಿನಾಥ್, 145 ಪಂದ್ಯಗಳಿಂದ 54.49 ಬ್ಯಾಟಿಂಗ್ ಸರಾಸರಿಯಲ್ಲಿ 10,245 ರನ್ ಗಳಿಸಿದ್ದಾರೆ. ಇದರಲ್ಲಿ 32 ಶತಕಗಳು ಸೇರಿವೆ. 

ಐಪಿಎಲ್’ನಲ್ಲಿ ಚೆನ್ನೈ ಸೂಪರ್’ಕಿಂಗ್ಸ್ ಅದ್ಭುತ ಪ್ರದರ್ಶನ ತೋರಿದ್ದ ಬದರಿನಾಥ್ 2008ರಿಂದ 2013ರವರೆಗೆ 1667 ರನ್ ಬಾರಿಸಿದ್ದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ