ಕಳೆದ ಆವೃತ್ತಿಯಲ್ಲಿ ಹೀನಾಯ ಪ್ರದರ್ಶನ ನೀಡಿದ ಐಪಿಎಲ್‌'ನ ಈ ತಂಡಕ್ಕೆ ಕೈಫ್‌ ಕೋಚ್‌..?

Published : Oct 20, 2018, 09:11 AM IST
ಕಳೆದ ಆವೃತ್ತಿಯಲ್ಲಿ ಹೀನಾಯ ಪ್ರದರ್ಶನ ನೀಡಿದ ಐಪಿಎಲ್‌'ನ ಈ ತಂಡಕ್ಕೆ ಕೈಫ್‌ ಕೋಚ್‌..?

ಸಾರಾಂಶ

ಪ್ರವೀಣ್‌ ಆಮ್ರೆ ಬದಲಿಗೆ ಸಹಾಯಕ ಕೋಚ್‌ ಆಗಿ ಭಾರತ ತಂಡದ ಮಾಜಿ ಆಟಗಾರ ಮೊಹಮದ್‌ ಕೈಫ್‌ರನ್ನು ನೇಮಿಸಿದೆ ಎಂದು ವರದಿಯಾಗಿದೆ. ಪ್ರವೀಣ್‌ ತಂಡ ನಡೆಸುವ ಪ್ರತಿಭಾನ್ವೇಷಣೆಯ ಉಸ್ತುವಾರಿ ವಹಿಸಲಿದ್ದಾರೆ. 

ನವದೆಹಲಿ[ಅ.20]: 2019ರ ಐಪಿಎಲ್‌ಗೆ ಇನ್ನೂ ಬಹಳಷ್ಟು ಸಮಯವಿದ್ದರೂ, ಡೆಲ್ಲಿ ಡೇರ್‌ಡೆವಿಲ್ಸ್‌ ತಂಡ ಮುಂದಿನ ಆವೃತ್ತಿಗೆ ಕೆಲ ಬದಲಾವಣೆಗಳನ್ನು ಮಾಡಿದೆ. 

ಪ್ರವೀಣ್‌ ಆಮ್ರೆ ಬದಲಿಗೆ ಸಹಾಯಕ ಕೋಚ್‌ ಆಗಿ ಭಾರತ ತಂಡದ ಮಾಜಿ ಆಟಗಾರ ಮೊಹಮದ್‌ ಕೈಫ್‌ರನ್ನು ನೇಮಿಸಿದೆ ಎಂದು ವರದಿಯಾಗಿದೆ. ಪ್ರವೀಣ್‌ ತಂಡ ನಡೆಸುವ ಪ್ರತಿಭಾನ್ವೇಷಣೆಯ ಉಸ್ತುವಾರಿ ವಹಿಸಲಿದ್ದಾರೆ. ಇದೇ ವೇಳೆ ತಂಡದ ಸಹ ಮಾಲೀಕತ್ವವನ್ನು ಜೆಎಸ್‌ಡಬ್ಲ್ಯು ಸಂಸ್ಥೆ ಪಡೆದುಕೊಂಡಿದ್ದು, ತಂಡದ ಹೆಸರು ಬದಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಡೆಲ್ಲಿ ಕಳೆದ 4 ಆವೃತ್ತಿಗಳಲ್ಲಿ ಪ್ಲೇ-ಆಫ್‌ಗೇರಲು ವಿಫಲವಾಗಿದೆ. 2018ರ ಆವೃತ್ತಿಯಲ್ಲಿ ತಂಡ ಕೊನೆ ಸ್ಥಾನ ಪಡೆದಿತ್ತು.

ಕೈಫ್ ತಮ್ಮ 20 ವರ್ಷಗಳ ವೃತ್ತಿ ಜೀವನದಲ್ಲಿ 13 ಟೆಸ್ಟ್, 125 ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಐಪಿಎಲ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?