ನಾಲ್ವರು ನಾಯಕರನ್ನು ಸಂಪರ್ಕ ಮಾಡಿದ್ದ ಬುಕ್ಕಿಗಳು..!

Published : Jul 20, 2018, 01:22 PM ISTUpdated : Jul 20, 2018, 01:29 PM IST
ನಾಲ್ವರು ನಾಯಕರನ್ನು ಸಂಪರ್ಕ ಮಾಡಿದ್ದ ಬುಕ್ಕಿಗಳು..!

ಸಾರಾಂಶ

ಬುಕ್ಕಿಗಳು ತಮ್ಮನ್ನು ಸಂಪರ್ಕಿಸಿದ ವಿಷಯವನ್ನು ಸ್ವತಃ ಆಟಗಾರರೇ ಐಸಿಸಿ ಭ್ರಷ್ಟಾಚಾರ ನಿಗ್ರಹ ಹಾಗೂ ಭದ್ರತಾ ಘಟಕಕ್ಕೆ ತಿಳಿಸಿದ್ದಾರೆ ಎಂದು ಐಸಿಸಿ ಹೇಳಿದೆ.

ನವದೆಹಲಿ(ಜು.20]: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಗುರುವಾರ ಜೂ.1, 2017ರಿಂದ ಮೇ 31, 2018ರ ಅವಧಿಯಲ್ಲಿ ನಾಲ್ವರು ಅಂತಾರಾಷ್ಟ್ರೀಯ ತಂಡಗಳ ನಾಯಕರನ್ನು ಬುಕ್ಕಿಗಳು ಸಂಪರ್ಕಿಸಿದ್ದಾಗಿ ಬಹಿರಂಗಗೊಳಿಸಿದೆ. 

ಬುಕ್ಕಿಗಳು ತಮ್ಮನ್ನು ಸಂಪರ್ಕಿಸಿದ ವಿಷಯವನ್ನು ಸ್ವತಃ ಆಟಗಾರರೇ ಐಸಿಸಿ ಭ್ರಷ್ಟಾಚಾರ ನಿಗ್ರಹ ಹಾಗೂ ಭದ್ರತಾ ಘಟಕಕ್ಕೆ ತಿಳಿಸಿದ್ದಾರೆ ಎಂದು ಐಸಿಸಿ ಹೇಳಿದೆ. ತನ್ನ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿರುವ ಐಸಿಸಿ, ಕಳೆದೊಂದು ವರ್ಷದಲ್ಲಿ 18 ಪ್ರಕರಣಗಳ ತನಿಖೆ ನಡೆಸಿರುವುದಾಗಿ ತಿಳಿಸಿದೆ. 

ಕ್ರಿಕೆಟಿಗರು ಭ್ರಷ್ಟಾಚಾರ ನಿಗ್ರಹ ಘಟಕ ಸಂಪರ್ಕಿಸಿ ವಿಷಯ ತಿಳಿಸುತ್ತಿರುವುದಕ್ಕೆ ಐಸಿಸಿ ಸಂತಸ ವ್ಯಕ್ತಪಡಿಸಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ