
ಬೆಂಗಳೂರು(ಸೆ.27): ನಾಳೆ ಭಾರತ - ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಸಾವಿರಾರು ಪೊಲೀಸರ ನಿಯೋಜಿಸಲಾಗಿದೆ. 3 ಡಿಸಿಪಿ, 11 ಎಸಿಪಿ, 37 ಇನ್ಸ್ಪೆಕ್ಟರ್, 84 ಸಬ್ ಇನ್ಸ್ಪೆಕ್ಟರ್, 1500 ಪೇದೆಗಳು, 6 ಕೆಎಸ್ಆರ್ ಪಿ ಮತ್ತು ಡಿಆರ್ ತುಕಡಿಗಳ ನಿಯೋಜಿಸಲಾಗಿದೆ . ಹೆಚ್ಚುವರಿಯಾಗಿ ಗರುಡ ಫೋರ್ಸ್ ಬಳಕೆ ಮಾಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ತಿಳಿಸಿದ್ದಾರೆ. ನಾಳೆ 1.30ಕ್ಕೆ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೆ ಏಕದಿನ ಪಂದ್ಯ ನಡೆಯಲಿದೆ. ಟೀ ಇಂಡಿಯಾ ಈಗಾಗಲೇ 3-0 ಸರಣಿ ಜಯಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.