
ಬೆಂಗಳೂರು(ಜೂ.24): ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಮತ್ತೊಮ್ಮೆ ಅರ್ಜಿಸಲ್ಲಿಸಿ ಎಂದು ಬಿಸಿಸಿಐ ಭಾರತ ತಂಡದ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಅವರನ್ನು ಕೇಳಿಕೊಂಡಿದೆ ಎಂದು ವರದಿಯಾಗಿದೆ.
ಆದರೆ ಬಿಸಿಸಿಐ ನೀಡಿರುವ ಈ ಆಹ್ವಾನವನ್ನು ಕೌಟುಂಬಿಕ ಕಾರಣ ನೀಡಿ ಗ್ಯಾರಿ ನಯವಾಗಿ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ಮುಖ್ಯ ಕೋಚ್ ಹುದ್ದೆಯಿಂದ ಅನಿಲ್ ಕುಂಬ್ಳೆ ಕೆಳಗಿಳಿದ ಬಳಿಕ ಮುಂದಿನ ಕೋಚ್ ಯಾರಾಗಬಹುದು ಎನ್ನುವ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಟೀಂ ಇಂಡಿಯಾದ ಭವಿಷ್ಯದ ಕೋಚ್ ಕುರಿತಂತೆ ಪ್ರತಿಕ್ರಿಯಿಸಿರುವ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ, ಹಾಲಿ ಕೋಚ್ ಕೋಚ್ ಹುದ್ದೆಗೆ ಅರ್ಜಿಸಲ್ಲಿರುವವರ ಪೈಕಿ ವಿರೇಂದ್ರ ಸೆಹ್ವಾಗ್ ಪ್ರಬಲ ಅಭ್ಯರ್ಥಿಯಾಗಿದ್ದಾರೆಂದು ಕರ್ಸ್ಟನ್ ಅಭಿಪ್ರಾಯಪಟ್ಟಿದ್ದಾರೆ. ಸೆಹ್ವಾಗ್ ನಾಯಕ ವಿರಾಟ್ ಕೊಹ್ಲಿ ಹಾಗೂ ಕ್ರಿಕೆಟ್ ಸಲಹಾ ಸಮಿತಿಯ ಸದಸ್ಯರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ ಹಾಗಾಗಿ ಸೆಹ್ವಾಗ್ ಕೋಚ್ ಆಗುವ ಸಾಧ್ಯತೆ ಹೆಚ್ಚು ಎಂದು ಟೀಂ ಇಂಡಿಯಾದ ಯಶಸ್ವಿ ಕೋಚ್ ಎಂದೇ ಗುರುತಿಸಿಕೊಂಡಿರುವ ಗ್ಯಾರಿ ಕರ್ಸ್ಟನ್ ಹೇಳಿದ್ದಾರೆ.
ಇನ್ನು ಒಂದು ವೇಳೆ ಟೀಂ ಇಂಡಿಯಾ ಮಾಜಿ ಆಟಗಾರ ರವಿ ಶಾಸ್ತ್ರಿ ಕೂಡಾ ಕೋಚ್ ಹುದ್ದೆಗೆ ಅರ್ಜಿಸಲ್ಲಿಸಿದರೆ ಸೆಹ್ವಾಗ್ ಇಲ್ಲವೇ ಶಾಸ್ತ್ರಿ ಇಬ್ಬರ ನಡುವೆ ಪೈಪೋಟಿ ನಡೆಯಲಿದ್ದು, ಇಬ್ಬರಲ್ಲೊಬ್ಬರು ಕೋಚ್ ಆಗುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತದೆ. ಏಕೆಂದರೆ ಕೊಹ್ಲಿ ಕೂಡಾ ರವಿಶಾಸ್ತ್ರಿ ಕೋಚ್ ಆಗಲಿ ಎನ್ನುವ ಇರಾದೆ ಹೊಂದಿದ್ದಾರೆ ಎಂದು ವರದಿಯಾಗಿದೆ.
ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಬಿಸಿಸಿಐ ನೂತನ ಕೋಚ್ ಆಯ್ಕೆ ಮಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.