
ನವದೆಹಲಿ(ಸೆ.23): ಟೀಂ ಇಂಡಿಯಾ ಕ್ರಿಕೆಟಿಗ ಗೌತಮ್ ಗಂಭೀರ್, ಡೆಲ್ಲಿ ರಣಜಿ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.
2016-17ನೇ ಸಾಲಿನ ಆವೃತ್ತಿಯ ರಣಜಿ ಟೂರ್ನಿಯಲ್ಲಿ ಡೆಲ್ಲಿ ತಂಡವನ್ನು ಅನುಭವಿ ಬೌಲರ್ ಇಶಾಂತ್ ಶರ್ಮಾ ಮುನ್ನಡೆಸಲಿದ್ದಾರೆ. ಕಳೆದ 4 ವರ್ಷಗಳ ಕಾಲ ಡೆಲ್ಲಿ ತಂಡವನ್ನು ಮುನ್ನಡೆಸಿದ್ದ ಗಂಭೀರ್, ಈ ಬಾರಿ ಕೇವಲ ಆಟಗಾರನಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.
ಕಳೆದ ಋತುವಿನ ವಿಜಯ್ ಹಜಾರೆ ಪಂದ್ಯಾವಳಿ ವೇಳೆ ಗಂಭೀರ್’ರನ್ನು ನಾಯಕತ್ವದಿಂದ ಕೆಳಗಿಳಿಸಿ ಯುವ ಕ್ರಿಕೆಟಿಗ ರಿಷಭ್ ಪಂತ್’ಗೆ ಪಟ್ಟ ಕಟ್ಟಲಾಗಿತ್ತು. ಈ ವೇಳೆ ಕೋಚ್ ಕೆ.ಪಿ. ಬಾಸ್ಕರ್ ಹಾಗೂ ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿತ್ತು, ಅಲ್ಲದೇ ಗಂಭೀರ್ ಅವರನ್ನು 4 ಪಂದ್ಯಗಳ ಮಟ್ಟಿಗೆ ತಂಡದಿಂದ ಹೊರಗಿಡಲಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.