ಹೆಣ್ಣು ಮಗುವಿನ ತಂದೆಯಾದ ಗಂಭೀರ್

Published : Jun 22, 2017, 08:31 PM ISTUpdated : Apr 11, 2018, 12:39 PM IST
ಹೆಣ್ಣು ಮಗುವಿನ ತಂದೆಯಾದ ಗಂಭೀರ್

ಸಾರಾಂಶ

ಇಂಡಿಯನ್ ಪ್ರೀಮಿಯರ್ ಲೀಗ್'ನಲ್ಲಿ ಪ್ರಸ್ತುತ ಕೊಲ್ಕತಾ ನೈಟ್'ರೈಡರ್ಸ್ ತಂಡದ ನಾಯಕರಾಗಿರುವ ಗಂಭೀರ್, 2012 ಮತ್ತು 2014ರಲ್ಲಿ ತಮ್ಮ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.

ನವದೆಹಲಿ(ಜೂ.22): ಕ್ರಿಕೆಟಿಗ ಗೌತಮ್ ಗಂಭೀರ್ ಅವರ ಪತ್ನಿ ನತಾಶಾ 2ನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂಭ್ರಮವನ್ನು ಗಂಭೀರ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

2011ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಗಂಭೀರ್‌ಗೆ ಈಗಾಗಲೇ ಅಜೇನಾ ಎಂಬ ಮಗಳಿದ್ದು, ಇದೀಗ ಮತ್ತೊಂದು ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿದ್ದಾರೆ.

ಗಂಭೀರ್ ಅವರ ಹಿರಿಯ ಪುತ್ರಿ, ತನ್ನ ಪುಟ್ಟ ತಂಗಿಯನ್ನು ಮಡಲಲ್ಲಿ ಮಲಗಿಸಿಕೊಂಡು ಆಡಿಸುತ್ತಿರುವ ಫೋಟೊವನ್ನು ಗೌತಿ ಟ್ವೀಟ್ ಮಾಡಿದ್ದು, ಅವರಿಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್'ನಲ್ಲಿ ಪ್ರಸ್ತುತ ಕೊಲ್ಕತಾ ನೈಟ್'ರೈಡರ್ಸ್ ತಂಡದ ನಾಯಕರಾಗಿರುವ ಗಂಭೀರ್, 2012 ಮತ್ತು 2014ರಲ್ಲಿ ತಮ್ಮ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ಕಿಲೋಮೀಟರ್ ಸೈಕಲ್‌ನಲ್ಲಿ ಸ್ಟೇಡಿಯಂಗೆ ಬರುತ್ತಿದ್ದ ಆಟಗಾರನಿಗೆ ಸಿಕ್ತು 14 ಕೋಟಿ ನಗದು! ಇದು ಐಪಿಎಲ್ ಜಾದೂ
ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!