
ಬೆಂಗಳೂರು[ಏ.23]: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಂ.ಎಸ್.ಧೋನಿ ಬ್ಯಾಟ್ ಮಾಡಿದ ರೀತಿ ಭಯ ಹುಟ್ಟಿಸಿತು ಎಂದು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ 1 ರನ್ ಸೋಲು ಅನುಭವಿಸಿತು. ಧೋನಿ 48 ಎಸೆತಗಳಲ್ಲಿ 84 ರನ್ ಗಳಿಸಿ ಅಜೇಯರಾಗಿ ಉಳಿದರು. ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ, ‘ಧೋನಿ ತಾವು ಯಾವುದಕ್ಕೆ ಹೆಸರುವಾಸಿಯಾಗಿದ್ದಾರೂ ಅದೇ ರೀತಿ ಆಡಿದರು. ಅವರ ಆರ್ಭಟ ನಮ್ಮಲ್ಲಿ ಭಾರಿ ಭಯ ಹುಟ್ಟಿಸಿತು. ಪಂದ್ಯ ಆ ರೀತಿ ಮುಕ್ತಾಯಗೊಳ್ಳಲಿದೆ ಎಂದು ನಿರೀಕ್ಷಿಸಿರಲಿಲ್ಲ’ ಎಂದಿದ್ದಾರೆ.
ಇನ್ನು ಭಾನುವಾರ ನಡೆದಿದ್ದ ಬೆಂಗಳೂರು ರಾಯಲ್ ಚಾಲೆಂಜರ್ಸ್ ಹಾಗೂ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಗೆಲುವು ಸಾಧಿಸಿತ್ತಾದರೂ ಚೆನ್ನೈ ತಂಡದ ನಾಯಕ ಧೋನಿ ಕೊನೆಯ ಓವರ್ ನಲ್ಲಿ ಆಡಿದ ಪರಿ ಎ್ಲಲರ ಹೃದಯ ಗೆದ್ದಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.