ರಿಯೊ ಒಲಿಂಪಿಕ್ಸ್ ಕೂಟದಲ್ಲಿ ಕೂದಲೆಳೆ ಅಂತರದಲ್ಲಿ ಪದಕ ವಂಚಿತರಾಗಿದ್ದ ದೀಪಾ ಕರ್ಮಾಕರ್ 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ನವದೆಹಲಿ[ಸೆ.19]: ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳದ ತಾರಾ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದು ಅನುಮಾನವೆನಿಸಿದೆ.
ಜಿಮ್ನಾಸ್ಟಿಕ್ಸ್: ದೀಪಾ ಒಲಿಂಪಿಕ್ಸ್ ಕನಸಿಗೆ ಪೆಟ್ಟು!
ದೀಪಾ ಗಾಯ ನಿರ್ವಹಣೆಯನ್ನು ಸರಿಯಾಗಿ ನಡೆಸಿಲ್ಲ. ಹೀಗಾಗಿ ಅವರ ವೃತ್ತಿಜೀವನವೇ ಮುಗಿಯುವ ಹಂತ ತಲುಪಿದೆ ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಮುಂದಿನ ತಿಂಗಳು ವಿಶ್ವ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ ಚಾಂಪಿಯನ್‌ಶಿಪ್ ನಡೆಯಲಿದ್ದು, ದೀಪಾ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.
ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ವಿನೇಶ್ ಫೋಗಟ್!
ಅವರ ಕೋಚ್ ಬಿಶ್ವೇಶ್ವರ್ ನಂದಿ, ‘ವಿಶ್ವ ಚಾಂಪಿಯನ್ಶಿಪ್ನಲ್ಲಿ ಸ್ಪರ್ಧಿಸಲಾಗುತ್ತಿಲ್ಲ ಎನ್ನುವ ಬೇಸರವಿದೆ. ಆದರೆ ಮುಂದಿನ ವರ್ಷ ಎಲ್ಲಾ 3 ವಿಶ್ವಕಪ್ಗಳಲ್ಲಿ ದೀಪಾ ಚಿನ್ನ ಇಲ್ಲವೇ ಬೆಳ್ಳಿ ಪದಕಗಳನ್ನು ಗೆಲ್ಲಬೇಕು. ಆಗ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಬಹುದು. ನಾವು ಭರವಸೆ ಕಳೆದುಕೊಂಡಿಲ್ಲ. 2020ರ ಒಲಿಂಪಿಕ್ಸ್ ಇಲ್ಲದಿದ್ದರೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಯತ್ನಿಸುತ್ತೇವೆ’ ಎಂದಿದ್ದಾರೆ.