ಸ್ಮೃತಿ ಮಂಧನಾಗೆ 23ನೇ ಹುಟ್ಟು ಹಬ್ಬದ ಸಂಭ್ರಮ

Published : Jul 18, 2019, 03:44 PM ISTUpdated : Jul 18, 2019, 03:53 PM IST
ಸ್ಮೃತಿ ಮಂಧನಾಗೆ 23ನೇ ಹುಟ್ಟು ಹಬ್ಬದ ಸಂಭ್ರಮ

ಸಾರಾಂಶ

ಮುಂಬೈ ಮೂಲದ ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಇಂದು 23ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು[ಜು.18]: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಬಿಕ ಆಟಗಾರ್ತಿ ಸ್ಮೃತಿ ಮಂಧನಾ ಇಂದು[ಜುಲೈ 18] 23ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಮುಂಬೈನಲ್ಲಿ 1996ರಲ್ಲಿ ಜನಿಸಿದ ಮಂಧನಾ, ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್‌ವುಮೆನ್ ಆಗಿ ಹೊರಹೊಮ್ಮಿದ್ದಾರೆ. 

ವಿಸ್ಡನ್ ಗೌರವ: ವಿರಾಟ್, ಮಂಧನಾ ಮುಡಿಗೆ ಮತ್ತೊಂದು ಗರಿ

ಪ್ರಸ್ತುತ ಕಾಲಘಟ್ಟದ ಅತ್ಯುತ್ತಮ ಎಡಗೈ ಬ್ಯಾಟ್ಸ್‌ವುಮೆನ್ ಎನಿಸಿಕೊಂಡಿರುವ ಮಂಧನಾ, ಹಾಲಿ ಐಸಿಸಿ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿದ್ದಾರೆ. ಇನ್ನು ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಟ್ರಯಲ್‌ಬ್ಲೇಜರ್ಸ್ ತಂಡದ ನಾಯಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

2018ರ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ 178 ರನ್ ಬಾರಿಸುವ ಮೂಲಕ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಅಲ್ಲದೇ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 3 ಪಟ್ಟಿಯೊಳಗೆ ಸ್ಥಾನ ಪಡೆಯಲು ಸಫಲವಾಗಿದ್ದರು. ಇದಾದ ಬಳಿಕ ಮಂಧನಾ ಹಿಂತಿರುಗಿ ನೋಡಲೇ ಇಲ್ಲ. ಕ್ರಿಕೆಟ್ ರಂಗದಲ್ಲಿ ತೋರಿದ ಅದ್ಭುತ ಪ್ರದರ್ಶನಕ್ಕಾಗಿ ಮಂಧನಾ ಕೆಲ ದಿನಗಳ ಹಿಂದಷ್ಟೇ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. 

ಸಾಮಾಜಿಕ ಜಾಲತಾಣಗಳಲ್ಲಿ ಮಂಧನಾ ಹುಟ್ಟುಹಬ್ಬಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?