
ಹೈದರಾಬಾದ್(ಅ.25): ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ ಸಾಹಾ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಹರ್ಭಜನ್ ಹೊಸ ವಿವಾದಕ್ಕೆ ಗುರಿಯಾಗಿದ್ದಾರೆ.
ನಿನ್ನೆ ಭಾರತ ಟೆಸ್ಟ್ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ ಸಾಹಾ ತಮ್ಮ 32ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು.
ಈ ವೇಳೆ ಭಜ್ಜಿ ಎಂದಿನಂತೆ ಟ್ವಿಟರ್ ಮೂಲಕ 'ವಿಶ್ವದ ಅತ್ಯುತ್ತಮ ವಿಕೆಟ್ ಕೀಪರ್ ವೃದ್ಧಿಮಾನ ಸಾಹಾಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಭಜ್ಜಿ ಟ್ವಿಟ್ ಮಾಡಿದ್ದಾರೆ.
ವಿಶ್ವದ ಶ್ರೇಷ್ಠ ವಿಕೆಟ್ ಕೀಪರ್ ಧೋನಿ, ಆದರೆ ಸಾಹಾಗೇಕೆ ನೀವು ಈ ರೀತಿಯ ವಿಷ್‌ಮಾಡಿದ್ದು ಎಂದು ಹಲವಾರು ಧೋನಿ ಅಭಿಮಾನಿಗಳು ಭಜ್ಜಿಗೆ ಟ್ವಿಟರ್ ಮೂಲಕ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಜೊತೆಗೆ ಭಜ್ಜಿಗೆ ತಲೆಕೆಟ್ಟಿದೆಯಂತಲೂ ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.