ಏಕದಿನ ವಿಶ್ವಕಪ್’ಗೆ ಭಜ್ಜಿ ಆಯ್ಕೆ ಮಾಡಿದ ಟೀಂ ಇಂಡಿಯಾವಿದು

Published : Feb 12, 2019, 05:12 PM IST
ಏಕದಿನ ವಿಶ್ವಕಪ್’ಗೆ ಭಜ್ಜಿ ಆಯ್ಕೆ ಮಾಡಿದ ಟೀಂ ಇಂಡಿಯಾವಿದು

ಸಾರಾಂಶ

ಹರ್ಭಜನ್ ಸಿಂಗ್ ಆಯ್ಕೆ ಮಾಡಿದ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಸ್ಥಾನ ಪಡೆದಿವೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ವಿಜಯ್ ಶಂಕರ್ ಅವರಿಗೆ ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವಕಪ್ ಟೂರ್ನಿಗೆ ಭಜ್ಜಿ ಆಯ್ಕೆ ಮಾಡಿದ ಭಾರತದ ಸಂಭಾವ್ಯ 15 ಆಟಗಾರರನ್ನೊಳಗೊಂಡ ಪಟ್ಟಿ ಇಲ್ಲಿದೆ ನೋಡಿ...  

ನವದೆಹಲಿ[ಫೆ.12]: ಬಹುನಿರೀಕ್ಷಿತ 2019ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿ ಬಲಿಷ್ಠ ಟೀಂ ಇಂಡಿಯಾ ಆಯ್ಕೆ ಮಾಡಲು ಕಸರತ್ತು ನಡೆಸುತ್ತಿದೆ. ಇದರ ಬೆನ್ನಲ್ಲೇ ಇಂಗ್ಲೆಂಡ್’ನಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ 15 ಆಟಗಾರರನ್ನೊಳಗೊಂಡ ಸಂಭಾವ್ಯ ಆಟಗಾರರ ಹೆಸರನ್ನು ಪಟ್ಟಿ ಮಾಡಿದ್ದಾರೆ. 

ರೋಹಿತ್’ಗೆ ರೆಸ್ಟ್; ಈ ಇಬ್ಬರಿಗೆ ವಿಶ್ವಕಪ್ ಎಂಟ್ರಿ ಕೊಡಲು ಕೊನೆಯ ಚಾನ್ಸ್..?

ಹರ್ಭಜನ್ ಸಿಂಗ್ ಆಯ್ಕೆ ಮಾಡಿದ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಸ್ಥಾನ ಪಡೆದಿವೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ವಿಜಯ್ ಶಂಕರ್ ಅವರಿಗೆ ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ’ವಿದರ್ಭ ಎಕ್ಸ್’ಪ್ರೆಸ್’ ಖ್ಯಾತಿಯ ಉಮೇಶ್ ಯಾದವ್ ಹಾಗೂ ಸೌರಾಷ್ಟ್ರದ ಆಲ್ರೌಂಡರ್ ರವೀಂದ್ರ ಜಡೇಜಾ ಅವರಿಗೂ ಸ್ಥಾನ ನೀಡಿದ್ದಾರೆ. ಆದರೆ ಮತ್ತೋರ್ವ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿದ್ದಾರೆ. ಅದೇರೀತಿ ಯುವ ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ರಿಷಭ್ ಪಂತ್ ಅವರನ್ನು ಕೈಬಿಟ್ಟು, ಅನುಭವಿ ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ದಿನೇಶ್ ಕಾರ್ತಿಕ್’ಗೆ ಸ್ಥಾನ ಕಲ್ಪಿಸಿದ್ದಾರೆ.

ಈ ಇಬ್ಬರು ಇದ್ದರೆ ಈ ಸಲ ವಿಶ್ವಕಪ್ ನಮ್ದೇ: ರಿಕಿ ಪಾಂಟಿಂಗ್

2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಜಡೇಜಾ ಅವರನ್ನು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್’ಗಿಳಿಸಬಹುದು. ಒಂದುವೇಳೆ ಎದುರಾಳಿ ತಂಡ 5-6 ಬಲಗೈ ಬ್ಯಾಟ್ಸ್’ಮನ್’ಗಳೊಂದಿಗೆ ಕಣಕ್ಕಿಳಿದರೆ ಜಡೇಜಾ ಬೌಲಿಂಗ್’ನಲ್ಲೂ ಉತ್ತಮ ಕಾಣಿಕೆ ನೀಡಬಲ್ಲರು, ಜತೆಗೆ ಅವರು ಈಗಲೂ ಭಾರತದ ಅತ್ಯುತ್ತಮ ಫೀಲ್ಡರ್’ಗಳಲ್ಲಿ ಒಬ್ಬರು ಎನ್ನುವ ಅಭಿಪ್ರಾಯವನ್ನು ಭಜ್ಜಿ ವ್ಯಕ್ತಪಡಿಸಿದ್ದಾರೆ.

ವಿಶ್ವಕಪ್ 2019: ಟೀಂ ಇಂಡಿಯಾ ಮುಂದಿರುವ 3 ಚಾಲೆಂಜ್!

2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.

ವಿಶ್ವಕಪ್ ಟೂರ್ನಿಗೆ ಹರ್ಭಜನ್ ಸಿಂಗ್ ಆಯ್ಕೆ ಮಾಡಿದ ಭಾರತದ ಸಂಭಾವ್ಯ 15 ಆಟಗಾರರ ಪಟ್ಟಿ ಇಲ್ಲಿದೆ:

ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಅಂಬಟಿ ರಾಯುಡು, ಎಂ.ಎಸ್ ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ದಿನೇಶ್ ಕಾರ್ತಿಕ್, ಉಮೇಶ್ ಯಾದವ್, ವಿಜಯ್ ಶಂಕರ್ ಹಾಗೂ [ರವೀಂದ್ರ ಜಡೇಜಾ]
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?