
ನವದೆಹಲಿ(ಮಾ.21): ಭಾರತ ಕ್ರಿಕೆಟ್ ತಂಡದ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್'ಗೆ ಗೌರವ ನಮನ ಸಲ್ಲಿಸಿದ್ದಾರೆ.
ಮಾ.23ರಂದು ಭಗತ್‌ಸಿಂಗ್'ರ 87ನೇ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ, ಅವರ ವಿಚಾರಧಾರೆಗಳನ್ನು ಅನುಸರಿಸುವಂತೆ ಭಜ್ಜಿ ಯುವಕರಿಗೆ ವಿಡಿಯೋವೊಂದರ ಮೂಲಕ ಮನವಿ ಮಾಡಿದ್ದಾರೆ.
‘ಯುವಜನಾಂಗ ಎಚ್ಚೆತ್ತುಕೊಳ್ಳಬೇಕು. ಭಗತ್ ಸಿಂಗ್ ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಸಾಗಬೇಕು’ ಎಂದು ಹರ್ಭಜನ್, ಯುವಜನರನ್ನು ಪ್ರೇರಿಪಿಸುವ ವಿಡಿಯೋ ಸಂದೇಶವೊಂದನ್ನು ನೀಡಿದ್ದಾರೆ. ಯೂಟೂಬ್'ನಲ್ಲಿ ಈ ವಿಡಿಯೋ ಭಾರೀ ಹಿಟ್ ಆಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.