
ಮುಂಬೈ(ಜೂನ್.6) : ಟೀಮ್ಇಂಡಿಯಾ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹೆಸರು ಹಲವು ಬಾಲಿವುಡ್ ನಟಿಯರೊಂದಿಗೆ ಥಳುಕು ಹಾಕಿಕೊಂಡಿದೆ. ಇತ್ತೀಚೆಗೆ ಬಾಲಿವುಡ್ ನಟಿ ಎಲ್ಲಿ ಅವ್ರಾಮ್ ಜೊತೆ ಹಾರ್ದಿಕ್ ಡೇಟಿಂಗ್ ನಡೆಸುತ್ತಿರೋದಾಗಿ ವರದಿಯಾಗಿತ್ತು. ಆದರೆ ಅವ್ರಾಮ್ ಜೊತೆಗಿನ ಬ್ರೇಕ್‌ಅಪ್ ಬಳಿಕ ಮತ್ತೊಬ್ಬ ಬಾಲಿವುಡ್ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿರು ಮಾತು ಕೇಳಿಬಂದಿದೆ.
ಸ್ಟೈಲೀಶ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಸದ್ಯ ಡೇಟಿಂಗ್ ಮಾಡುತ್ತಿರುವುದು ಬಾಲಿವುಡ್ ನಟಿ ಇಶಾ ಗುಪ್ತಾ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಹಾರ್ದಿಕ್ ಪಾಂಡ್ಯ ಇದೀಗ ಇಷಾ ಗುಪ್ತಾ ಇತ್ತೀಚೆಗೆ ಪಾರ್ಟಿಯೊಂದರಲ್ಲಿ ಭೇಟಿಯಾಗಿದ್ದರು. ಡೇಟಿಂಗ್ ವಿಚಾರವನ್ನ ಗೌಪ್ಯವಾಗಿಡಲು ಇವರಿಬ್ಬರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಕಳೆದೊಂದು ವರ್ಷ ನಟಿ ಎಲ್ಲಿ ಅವ್ರಾಮ್ ಜೊತೆ ಡೇಟಿಂಗ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಇದೀಗ ಸದ್ದಿಲ್ಲದೇ ಮತ್ತೊಬ್ಬ ನಟಿಯ ಜೊತೆ ಪಾರ್ಟಿ ಶುರು ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಸಹೋದರ ಕ್ರುನಾಲ್ ಪಾಂಡ್ಯ ಮದುವೆ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಅವ್ರಾಮ್ ಜೊತೆಗಿನ ಡೇಟಿಂಗ್ ಬಹಿರಂಗವಾಗಿತ್ತು. ಬಳಿಕ ಅಂತಾರಾಷ್ಟ್ರೀಯ ಪಂದ್ಯದ ವೇಳೆ ಅವ್ರಾಮ್ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಆದರೆ ರಿಲೇಶನ್‌ಶಿಪ್ ಕುರಿತು ಇವರಿಬ್ಬರು ಎಲ್ಲೂ ಬಾಯಿ ಬಿಟ್ಟಿರಲಿಲ್ಲ. ಆದರೆ ಇತ್ತೀಚೆಗೆ ಅವ್ರಾಮ್ ಹಾಗೂ ಹಾರ್ದಿಕ್ ಸಂಬಂಧ ಮುರಿದು ಬಿದ್ದಿದೆ ಎನ್ನಲಾಗುತ್ತಿದೆ. ಹೀಗಾಗಿ ಹಾರ್ದಿಕ್ ಇಷಾ ಗುಪ್ತಾ ಜೊತೆ ಸುತ್ತಾಡಲು ರೆಡಿಯಾಗಿದ್ದಾರೆ ಎಂಬ ಮಾಹಿತಿಗಳು ಹೊರಬಿದ್ದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.