ಹೆಲಿಕಾಪ್ಟರ್ ಸಿಕ್ಸರ್- ಹಾರ್ದಿಕ್ ಪಾಂಡ್ಯ ಭರ್ಜರಿ ಐಪಿಎಲ್ ಅಭ್ಯಾಸ!

Published : Mar 14, 2019, 03:25 PM IST
ಹೆಲಿಕಾಪ್ಟರ್ ಸಿಕ್ಸರ್- ಹಾರ್ದಿಕ್ ಪಾಂಡ್ಯ ಭರ್ಜರಿ ಐಪಿಎಲ್ ಅಭ್ಯಾಸ!

ಸಾರಾಂಶ

ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಎಂ.ಎಸ್.ಧೋನಿಗೆ ಚಾಲೆಂಜ್ ಹಾಕಿದ್ದಾರೆ. ಧೋನಿ ರೀತಿ ಹೆಲಿಕಾಪ್ಟರ್ ಸಿಕ್ಸರ್ ಸಿಡಿಸಿರುವ ಹಾರ್ದಿಕ್, 12ನೇ ಆವೃತ್ತಿಐಪಿಎಲ್ ಆರಂಭಕ್ಕೆ ಕೆಲ ದಿನಗಳ ಮುಂಚೆಯೇ ಧೋನಿಗೆ ಚಾಲೆಂಜ್ ಹಾಕಿದ್ದಾರೆ.  

ಮುಂಬೈ(ಮಾ.14): ಇಂಜುರಿಯಿಂದ ಚೇತರಿಸಿಕೊಂಡಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ ಅಭ್ಯಾಸ ಆರಂಭಿಸಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಕ್ರಿಕೆಟಿಗ ವಾಂಖೆಡೆ ಕ್ರೀಡಾಂಗಣದಲ್ಲಿ ಭರ್ಜರಿ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಅಭ್ಯಾಸದ ವೇಳೆ ಹಾರ್ದಿಕ್ ಹೆಲಿಕಾಪ್ಟರ್ ಸಿಕ್ಸರ್ ಭಾರಿಸೋ ಮೂಲಕ ಎಂ.ಎಸ್.ಧೋನಿಗೆ ಚಾಲೆಂಜ್ ಹಾಕಿದ್ದಾರೆ.

ಇದನ್ನೂ ಓದಿ: ಧೋನಿಗೆ ಚಾಲೆಂಜ್ - ಯುವಿ ಹೆಲಿಕಾಪ್ಟರ್ ಸಿಕ್ಸರ್ ವೈರಲ್!

ನೆಟ್ ಪ್ರಾಕ್ಟೀಸ್ ವೇಳೆ ಹೆಲಿಕಾಪ್ಟರ್ ಸಿಕ್ಸರ್ ಸಿಡಿಸಿರುವ ಹಾರ್ದಿಕ್ ಸಾಮಾಜಿಕ ಜಾಲತಾಣದಲ್ಲಿ ವಿಡೀಯೋ ಪೋಸ್ಟ್ ಮಾಡಿದ್ದಾರೆ. ಬಳಿಕ ಈ ಹೊಡೆತಕ್ಕೆ ಸ್ಪೂರ್ತಿ ಯಾರು ಅನ್ನೋದನ್ನು ಊಹೆ ಮಾಡಿ ಎಂದು ಬರೆದುಕೊಂಡಿದ್ದಾರೆ. 

 

 

ಇದನ್ನೂ ಓದಿ: ಸದ್ದಿಲ್ಲದೇ ಮುಂಬೈ ತರಬೇತಿ ಶಿಬಿರ ಸೇರಿಕೊಂಡ ಟೀಂ ಇಂಡಿಯಾ ಕ್ರಿಕೆಟಿಗ!

12ನೇ ಆವೃತ್ತಿ ಐಪಿಎಲ್ ಟೂರ್ನಿ ಮಾರ್ಚ್ 23 ರಿಂದ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನವೇ ಎಂ.ಎಸ್.ಧೋನಿಗೆ ಚಾಲೆಂಜ್ ಹೆಚ್ಚಾಗುತ್ತಿದೆ. ಇತ್ತೀಚಗಷ್ಟೇ ಮುಂಬೈ ಇಂಡಿಯನ್ಸ್ ತಂಡದ ಹಿರಿಯ ಆಲ್ರೌಂಡರ್ ಯುವರಾಜ್ ಸಿಂಗ್ ಹೆಲಿಕಾಪ್ಟರ್ ಸಿಕ್ಸರ್ ಸಿಡಿಸಿ ಗಮನಸೆಳೆದಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!