ಧೋನಿ, ರೋಹಿತ್ ಶರ್ಮಾ ದಾಖಲೆ ಮುರಿದ ಹರ್ಮನ್‌ಪ್ರೀತ್ ಕೌರ್!

By Web Desk  |  First Published Oct 4, 2019, 8:44 PM IST

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾರತೀಯ ಕ್ರಿಕೆಟಿಗರ್ಯಾರು ಮಾಡದ ಸಾಧನೆ ಮಾಡಿದ್ದಾರೆ. ಧೋನಿ, ರೋಹಿತ್ ಶರ್ಮಾ ಹಿಂದಿಕ್ಕಿದ ಕೌರ್ ಸಾಧನೆ ಕುರಿತ ವಿವರ ಇಲ್ಲಿದೆ.


ಸೂರತ್(ಅ.04): ಭಾರತ ಮಹಿಳಾ ಟಿ20 ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಹೊಸ ದಾಖಲೆ ಬರೆದಿದ್ದಾರೆ. ಸೌತ್ ಆಫ್ರಿಕಾ ವಿರುದ್ದದ 6ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 100 ಚುಟುಕು ಪಂದ್ಯ ಆಡಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಟೀಂ ಇಂಡಿಯಾದ ಎಂ.ಎಸ್.ಧೋನಿ ಹಾಗೂ ರೋಹಿತ್ ಶರ್ಮಾ ದಾಖಲೆ ಮುರಿದಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ಕ್ಯಾಪ್ಟನ್ಸ್ ಕೊಹ್ಲಿ-ಹರ್ಮನ್’ಪ್ರೀತ್’ಗಿವೆ 4 ಸಾಮ್ಯತೆಗಳು

Latest Videos

ಇದುವರೆಗೆ 100 ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದ ಸಾಧನೆಯನ್ನು ಯಾವ ಭಾರತೀಯ ಆಟಗಾರ ಮಾಡಿಲ್ಲ. ಇದೀಗ ಹರ್ಮನ್‌ಪ್ರೀತ್ ಕೌರ್ ದಾಖಲೆ  ಬರೆದಿದ್ದಾರೆ. ಟೀಂ ಇಂಡಿಯಾ ಪರ ಎಂ.ಎಸ್.ಧೋನಿ ಹಾಗೂ ರೋಹಿತ್ ಶರ್ಮಾ 98 ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದ್ದಾರೆ. ಇಲ್ಲೀವರೆಗೆ ಇದು ಗರಿಷ್ಠವಾಗಿತ್ತು. ಇದೀಗ ಈ ದಾಖಲೆಯನ್ನು ಕೌರ್ ಬ್ರೇಕ್ ಮಾಡಿದ್ದಾರೆ.

ಇದನ್ನೂ ಓದಿ: ಧೋನಿಯಂತೆ ಮ್ಯಾಚ್ ಫಿನಿಶ್ ಮಾಡಿದ ಹರ್ಮನ್’ಪ್ರೀತ್ ಕೌರ್..!

ಪುರುಷರದಲ್ಲಿ ಪಾಕಿಸ್ತಾನ ಶೋಯಿಬ್ ಮಲಿಕ್ 111 ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದ್ದಾರೆ. ಈ ಮೂಲಕ 100ರ ಗಡಿ ದಾಟಿದ ಏಕೈಕ ಪುರುಷ ಕ್ರಿಕೆಟಿಗ ಅನ್ನೋ ದಾಖಲೆ ಬರೆದಿದ್ದಾರೆ. ಇನ್ನು ಮಹಿಳಾ ಕ್ರಿಕೆಟಿಗರ ಪೈಕಿ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ 10 ಆಟಗಾರ್ತಿಯರು 100ಕ್ಕೂ ಹೆಚ್ಚಿನ ಪಂದ್ಯ ಆಡಿದ್ದಾರೆ. ನ್ಯೂಜಿಲೆಂಡ್‌ನ ಸುಜಿ ಬೇಟ್ಸ್ ಹಾಗೂ ಆಸ್ಟ್ರೇಲಿಯಾದ ಎಲ್ಲಿಸ್ ಪೆರಿ 111 ಟಿ20 ಪಂದ್ಯ ಆಡಿ ಮೊದಲ ಸ್ಥಾನ ಹಂಚಿಕೊಂಡಿದ್ದಾರೆ.  
 

click me!