
ಬೆಂಗಳೂರು(ಮೇ.04): ರೈಸಿಂಗ್ ಪುಣೆ ಸೂಪರ್'ಜೈಂಟ್ ತಂಡದ ಸಹಮಾಲಿಕ ಸಂಜಯ್ ಗೋಯಂಕಾ ಅವರ ಸಹೋದರ ಹರ್ಷಾ ಗೋಯೆಂಕಾ, ಧೋನಿ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿ ವ್ಯಾಪಕ ಟೀಕೆಗೆ ಗುರಿಯಾದ ಬೆನ್ನಲ್ಲೇ ಈಗ ಮತ್ತೊಂದು ಅವಾಂತರ ಮಾಡಿಕೊಂಡಿದ್ದಾರೆ.
ಧೋನಿಯನ್ನು ಕೆಳಗಿಳಿಸಿ ಸ್ಟೀವ್ ಸ್ಮಿತ್ ಅವರನ್ನು ನೇಮಕ ಮಾಡಿಕೊಂಡಿದ್ದು ಸರಿಯಾದ ನಿರ್ಧಾರ. ಕಾಡಿನ ರಾಜ ಯಾರು ಎಂದು ಸ್ಮಿತ್ ಸಾಬೀತು ಪಡಿಸಿದ್ದಾರೆ ಎಂದು ಹರ್ಷಾ ಗೋಯೆಂಕಾ ಟ್ವೀಟ್ ಮಾಡಿ ವಿವಾದ ಮೈಮೇಲೆಳೆದುಕೊಂಡಿದ್ದರು.
ಈಗ ಹೊಸ ವಿಷಯ ಏನಪ್ಪಾ ಅಂದ್ರೆ ಕಿಂಗ್ಸ್ ಇಲೆವನ್ ಪಂಜಾಬ್ ಎದುರಿನ ಪಂದ್ಯದಲ್ಲಿ ಎಂ.ಎಸ್ ಧೋನಿ 11 ಎಸೆತಗಳನ್ನು ಎದುರಿಸಿ 5ರನ್ ಬಾರಿಸಿದ್ದರು. ಈ ಕುರಿತು ಧೋನಿ ಹೆಸರೆತ್ತದೇ ಹರ್ಷಾ ಗೋಯೆಂಕಾ ಈ ರೀತಿ ಟ್ವೀಟ್ ಮಾಡಿದ್ದಾರೆ...
ಅಷ್ಟಕ್ಕೂ ಹರ್ಷಾ ಗೋಯೆಂಕಾ ಏನಂದ್ರೂ ಅಂತ ನೀವೇ ಒಮ್ಮೆ ನೋಡಿ....
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.