ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಬಾತ್‌ರೂಮ್‌ನಲ್ಲೇ ಹಾಕಿ ಕೋಚ್ ಅತ್ಯಾ*ಚಾರ; ಆರೋಪಿ ಜೈಲಿಗಟ್ಟಿದ ಪೊಲೀಸರು

Published : Jan 12, 2026, 12:34 PM IST
POCSO case

ಸಾರಾಂಶ

ಹರ್ಯಾಣದ ರೇವಾರಿಯಲ್ಲಿ, ಜೂನಿಯರ್ ಹಾಕಿ ಮಹಿಳಾ ತಂಡದ ಕೋಚ್ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾ*ಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ನಾಲ್ಕು ತಿಂಗಳ ಹಿಂದೆ ನಡೆದ ಈ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿ, ನಂತರ ಗರ್ಭಪಾತವಾಗಿತ್ತು. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಚಂಡೀಗಢ: ಹರ್ಯಾಣದ ರೇವಾರಿ ಜಿಲ್ಲೆಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿ, ಗರ್ಭಿಣಿಯನ್ನಾಗಿ ಮಾಡಿದ ಆರೋಪದಡಿ ಜೂನಿಯರ್ ಹಾಕಿ ಮಹಿಳಾ ತಂಡದ ಕೋಚ್‌ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಯಾಣದ ರೇವಾರಿ ಜಿಲ್ಲೆಯಲ್ಲಿ ನಡೆದ ಪ್ರಕರಣ

ರೇವಾರಿ ಜಿಲ್ಲೆಯ ಹಳ್ಳಿಯೊಂದರ 12 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶುಕ್ರವಾರ ಖೋಲ್ ಪೊಲೀಸ್ ಠಾಣೆಯಲ್ಲಿ ಅತ್ಯಾ*ಚಾರ ದೂರು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಹಾಕಿ ಆಡುತ್ತಿದ್ದ ಈ ವಿದ್ಯಾರ್ಥಿನಿಗೆ ಈ ಕೋಚ್ ಕಳೆದ ಮೂರು ವರ್ಷಗಳಿಂದ ಪರಿಚಯವಾಗಿದ್ದರು ಎಂದು ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾಳೆ. ಆ ಬಾಲಕಿ ತರಬೇತಿ ಪಡೆಯುತ್ತಿದ್ದ ಸ್ಟೇಡಿಯಂನ ಬಾತ್‌ರೂಮ್‌ನಲ್ಲಿ ಕೋಚ್ ಕಳೆದ ನಾಲ್ಕು ತಿಂಗಳ ಹಿಂದೆ ಅತ್ಯಾ*ಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾಳೆ.

ಇದಾದ ಬಳಿಕ ಆ ಅಪ್ರಾಪ್ತ ಯುವತಿ ಗರ್ಭಿಣಿಯಾಗಿದ್ದಾಳೆ. ಇದರಿಂದ ಆಕೆಯ ಆರೋಗ್ಯ ಹದಗೆಟ್ಟಿದ್ದು, ಜನವರಿ 05ರಂದು ಆಕೆಗೆ ಗರ್ಭಪಾತವಾಗಿದೆ. ಇದಾದ ನಂತರ ಆಕೆಯನ್ನು ಅವರು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರು ಎಂದು ಸಂತ್ರಸ್ಥೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಾದ ಬಳಿಕ ಪೊಲೀಸರು ಹಾಕಿ ಕೋಚ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

"ಆರೋಪಿಯನ್ನು ಬಂಧಿಸಿದ್ದೇವೆ. ನಗರ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ನಾವು ಆತನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ" ಎಂದು ರೇವಾರಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಟಿ20 ವಿಶ್ವಕಪ್‌: ಬಾಂಗ್ಲಾದ ಪಂದ್ಯಕ್ಕೆ ಆತಿಥ್ಯ ವಹಿಸಲು ಮುಂದೆ ಬಂದ ಪಾಕಿಸ್ತಾನ! ಆದ್ರೆ ಇದು ಸಾಧ್ಯನಾ?
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ; ಈ ದಾಖಲೆ ಮುರಿಯಲು ಕೊಹ್ಲಿ, ಬಟ್ಲರ್‌ಗೂ ಸಾಧ್ಯವಿಲ್ಲ!