
ದುಬೈ(ಅ.03): ಬಾಂಗ್ಲಾದೇಶದ ವಿರುದ್ಧ 333 ರನ್'ಗಳ ಭರ್ಜರಿ ಜಯಭೇರಿ ಬಾರಿಸಿರುವ ದಕ್ಷಿಣ ಆಫ್ರಿಕ ತಂಡದ ಆಟಗಾರರು ಐಸಿಸಿ ಬಿಡುಗಡೆ ಮಾಡಿದ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಅದರಲ್ಲೂ ಶತಕ ಸಿಡಿಸಿದ ಹಶೀಂ ಆಮ್ಲಾ ಹಾಗೂ ಡೀನ್ ಎಲ್ಗರ್ ಕ್ರಮವಾಗಿ 7 ಹಾಗೂ 12ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಇನ್ನು ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ನಾಲ್ಕನೇ ಸ್ಥಾನ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 6ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲೇ ಮುಂದುವರೆದಿದ್ದರೆ, ಜೋ ರೂಟ್ ಹಾಗೂ ಕೇನ್ ವಿಲಿಯಮ್'ಸನ್ ಮೊದಲ ಮೂರು ಸ್ಥಾನದಲ್ಲಿ ಭದ್ರವಾಗಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಜೇಮ್ಸ್ ಆ್ಯಂಡರ್'ಸನ್, ರವೀಂದ್ರ ಜಡೇಜಾ ಹಾಗೂ ಅಶ್ವಿನ್ ಕ್ರಮವಾಗಿ ಟಾಪ್-3 ಪಟ್ಟಿಯಲ್ಲೇ ಮುಂದುವರೆದಿದ್ದಾರೆ. ಹಾಗೆಯೇ ಆಲ್ರೌಂಡರ್ ವಿಭಾಗದಲ್ಲೂ ಯಾವುದೇ ಬದಲಾವಣೆಗಳಾಗಿಲ್ಲ. ಎಂದಿನಂತೆ ಶಕೀಬ್ ಅಲ್ ಹಸನ್, ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ಮೊದಲ 3 ಸ್ಥಾನದಲ್ಲೇ ಮುಂದುವರೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.