
ನವದೆಹಲಿ(ನ.06): ಚೀನಾ ವಿರುದ್ಧ ಭರ್ಜರಿ ಜಯಭೇರಿ ಬಾರಿಸುವ ಮೂಲಕ 13 ವರ್ಷಗಳ ಬಳಿಕ ಏಷ್ಯಾ ಕಪ್ ಹಾಕಿ ಟ್ರೋಫಿ ಜಯಿಸಿದ ರಾಣಿ ರಾಂಪಾಲ್ ನೇತೃತ್ವದ ವನಿತೆಯರ ಹಾಕಿ ತಂಡಕ್ಕೆ ಹಾಕಿ ಇಂಡಿಯಾ ಭರ್ಜರಿ ಇನಾಮು ಘೋಷಿಸಿದೆ.
ಹೌದು, 13 ವರ್ಷಗಳ ಬಳಿಕ ಐತಿಹಾಸಿಕ ಸಾಧನೆ ಮಾಡಿದ ಭಾರತ ಮಹಿಳಾ ಹಾಕಿ ತಂಡದ ಆಟಗಾರ್ತಿಯರಿಗೆ ಹಾಕಿ ಇಂಡಿಯಾ ತಲಾ ₹ 1 ಲಕ್ಷ ಬಹುಮಾನ ಘೋಷಿಸಿದೆ. ತಂಡದ ಎಲ್ಲಾ 18 ಆಟಗಾರ್ತಿಯರು ಹಾಗೂ ಕೋಚ್ ಹರೇಂದರ್ ಸಿಂಗ್‌ಗೆ ₹ 1 ಲಕ್ಷ ಮತ್ತು ಸಹಾಯಕ ಸಿಬ್ಬಂದಿಗೆ ತಲಾ ₹ 50,000 ಬಹುಮಾನ ನೀಡುವುದಾಗಿ ತಿಳಿಸಿದೆ.
ಭಾನುವಾರ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಚೀನಾ ವಿರುದ್ಧ ಭಾರತ 4-4 ಗೋಲುಗಳ ಸಮಬಲ ಸಾಧಿಸಿದ್ದವು. ಆ ವೇಳೆ ಗೋಲ್ ಕೀಪರ್ ಸವಿತ ಅವರು ಚೀನಾ ದಾಳಿಯನ್ನು ತಡೆಯುವಲ್ಲಿ ಯಶಸ್ವಿಯಾದರು ಆ ಬಳಿಕ ಪೆನಾಲ್ಟಿ ಶೂಟೌಟ್'ನಲ್ಲಿ ರೋಚಕ ಜಯ ಸಾಧಿಸಿ ರಾಣಿ ಪಡೆ ಪ್ರಶಸ್ತಿ ಎತ್ತಿಹಿಡಿದಿತ್ತು. ಇದರ ಜೊತೆಗೆ 2018ರ ಮಹಿಳಾ ವಿಶ್ವಕಪ್'ಗೂ ಆರ್ಹತೆ ಗಿಟ್ಟಿಸಿಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.