
ಅಹ್ಮದಾಬಾದ್(ಸೆ.29) : ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಗುಜರಾತ್ ಕ್ರಿಕೆಟ್ ಸಂಸ್ಥೆ (ಜಿಸಿಎ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನರೇಂದ್ರ ಮೋದಿ 2014ರಲ್ಲಿ ಪ್ರಧಾನಿಯಾದ ಬಳಿಕ ಅಮಿತ್ ಶಾ ಜಿಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸದ್ಯ ಅಮಿತ್ ಶಾ ತಮ್ಮ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಇದನ್ನೂ ಓದಿ: ಯಾರದೋ ಕೇಸಲ್ಲಿ ಸಿಲುಕಿದ ಭಾರತ ಕ್ರಿಕೆಟ್ ಸಿಬ್ಬಂದಿ..!
ಆದರೆ ಗುಜರಾತ್ ಕ್ರಿಕೆಟ್ ಸಂಸ್ಥೆಗೆ ನೂತನ ಅಧ್ಯಕ್ಷ ಯಾರಾಗಲಿದ್ದಾರೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಅಮಿತ್ ಶಾ ಪುತ್ರ ಜಯ್ ಶಾ ಕಾರ್ಯದರ್ಶಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಧ್ಯಕ್ಷ ಗಾದಿಗೇರಿದರೆ ಅಚ್ಚರಿಯಿಲ್ಲ. ಉಪಾಧ್ಯಕ್ಷ ಪರಿಮಳ್ ನಾಥ್ವಾನಿ ರಾಜೀನಾಮೆ ನೀಡಿದ್ದು, ಪುತ್ರ ಧನರಾಜ್ ಸ್ಥಾನ ಅಲಂಕರಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: ಮೊಹಮ್ಮದ್ ಅಜರುದ್ದೀನ್‌ಗೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಪಟ್ಟ!
ಲೋಧ ಸಮಿತಿ ಶಿಫಾರಸಿನ ಬಳಿಕ ಕ್ರಿಕೆಟ್ ಸಂಸ್ಥೆಗಳಲ್ಲಿ ಹಲವು ಬದಲಾವಣೆ ತರಲಾಗಿದೆ. ಕ್ರಿಕೆಟಿಗರೇ ಆಡಳಿತದ ಚುಕ್ಕಾಣಿ ಹಿಡಿಯಬೇಕು ಅನ್ನೂ ನಿಯಮವಿದೆ. 2 ಬಾರಿಗಿಂತ ಹೆಚ್ಚು ಅವಧಿ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಅಧ್ಯಕ್ಷರಾಗಿ ಮುಂದುವರಿಯುವಂತಿಲ್ಲ. ಹೀಗಾಗಿ ಎಲ್ಲಾ ರಾಜ್ಯ ಕ್ರಿಕೆಟ್ ಸಂಸ್ಥೆಗಳು ಶಿಫಾರಸನ್ನ ಅಂಗೀಕರಿಸಿದರೆ ಮಾತ್ರ, ಬಿಸಿಸಿಐ ಧನ ಸಹಾಯ ನೀಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.