
ನವದೆಹಲಿ(ಡಿ.29): ‘ಭಾರತ ತಂಡಕ್ಕೆ ಆಯ್ಕೆಯಾಗುವುದು ತಾತ್ಕಾಲಿಕ. ತಂಡಕ್ಕೆ ಆಯ್ಕೆಯಾಗುವುದರ ಕುರಿತು ಯೋಚಿಸುವುದನ್ನು ಕೈಬಿಟ್ಟಿದ್ದೇನೆ. ಸದ್ಯ ನಾನು ಭಾವನಾರಹಿತನಾಗಿದ್ದೇನೆ’ ಎಂದು ಮುಂಬೈ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಹತಾಶೆ ವ್ಯಕ್ತಪಡಿಸಿದ್ದಾರೆ.
2014ರಲ್ಲಿ ರಣಜಿ ಟ್ರೋಫಿಯಲ್ಲಿ ಮಿಂಚುವ ಮೂಲಕ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದ ಶ್ರೇಯಸ್ ಅವಕಾಶದ ಕೊರತೆ ಎದುರಿಸುತ್ತಿದ್ದಾರೆ. ಭಾರತದ ಪರ ಅವರು ಕೊನೆಯದಾಗಿ ಆಡಿದ್ದು ಈ ವರ್ಷ ಫೆಬ್ರವರಿಯಲ್ಲಿ. ವಿಂಡೀಸ್ ವಿರುದ್ಧ ಏಕದಿನ ಪಂದ್ಯವನ್ನಾಗಿದ್ದರು.
‘ಭಾರತ ತಂಡದಲ್ಲಿ ಸ್ಥಾನ ಸಿಕ್ಕಿದೆ, ಸಿಕ್ಕಿಲ್ಲ ಎಂದು ಯಾರಾದರು ಮಾಹಿತಿ ನೀಡುತ್ತಾರೆ. ನಾನು ತಲೆ ಕೆಡಿಸಿಕೊಳ್ಳುವುದನ್ನೇ ಬಿಟ್ಟಿದ್ದೇನೆ. ತಂಡಕ್ಕೆ ಆಯ್ಕೆಯಾಗುವ ವಿಚಾರ ನನ್ನ ಸಂತಸದ ಕ್ಷಣಗಳನ್ನು ಆಳುವುದು ನನಗೆ ಇಷ್ಟವಿಲ್ಲ. ರಣಜಿಯಲ್ಲಿ ಆಡುವುದು ನನಗೆ ಖುಷಿ ಕೊಡುತ್ತಿದೆ’ ಎಂದು ಶ್ರೇಯಸ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.