
ಜಮೈಕಾ(ಜು.05): ಐಪಿಎಲ್, ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ಮಿಂಚಿನ ಬ್ಯಾಟಿಂಗ್ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದ ಆಲ್'ರೌಂಡರ್ ಹಾರ್ದಿಕ್ ಪಾಂಡ್ಯ ತಾವು ಟೀಂ ಇಂಡಿಯಾದಲ್ಲಿ ಫಿನಿಶರ್ ಜವಾಬ್ದಾರಿ ನಿಭಾಯಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ.
‘ಪಂದ್ಯದ ಕೊನೆಯ ಹಂತದಲ್ಲಿ ಬ್ಯಾಟಿಂಗ್ ನಡೆಸುವುದು ಕಠಿಣ ಎಂಬುದು ನನಗೆ ಮನವರಿಕೆಯಾಗಿದೆ. ಅಂತಹ ಸಂದರ್ಭದಲ್ಲಿ ಬೌಲರ್‌ಗಳು ಒತ್ತಡ ಹೇರಲು ಪ್ರಯತ್ನಿಸುತ್ತಾರೆ. ಇಂತಹ ಸನ್ನಿವೇಶಗಳನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ’ ಎಂದು ಪಾಂಡ್ಯ ಹೇಳಿದ್ದಾರೆ.
ನಾನು ಕೇವಲ ಬ್ಯಾಟಿಂಗ್ ಇಲ್ಲವೇ ಬೌಲಿಂಗ್'ಗೆ ಮಾತ್ರ ಸೀಮಿತವಾಗಲು ಬಯಸುವುದಿಲ್ಲ, ಬದಲಾಗಿ ಆಲ್ರೌಂಡರ್ ಆಗುವತ್ತ ಹೆಚ್ಚು ಗಮನ ಹರಿಸುತ್ತೇನೆಂದು ಪಾಂಡ್ಯ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಏಕಾಂಗಿ ಹೋರಾಟ ನಡೆಸಿದ ಪಾಂಡ್ಯ, ಕೇವಲ 46 ಎಸೆತಗಳಲ್ಲಿ 76 ರನ್ ಸಿಡಿಸಿ ಗಮನ ಸೆಳೆದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.