
ನವದೆಹಲಿ(ಮೇ.): ಅಂತರಾಷ್ಟ್ರೀಯ ಕ್ರಿಕೆಟ್'ಗೆ ವಿದಾಯ ಹೇಳಿರುವ ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ತಮ್ಮ ನಿವೃತ್ತಿಯ ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
ಖಾಸಗಿ ಚಾನಲ್'ವೊಂದರಲ್ಲಿ 'ಬ್ರೇಕ್'ಪಾಸ್ಟ್ ವಿತ್ ಚಾಂಪಿಯನ್ಸ್' ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಎಬಿಡಿ, ಒಂದು ವೇಳೆ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2023ರ ವಿಶ್ವಕಪ್ ಟೂರ್ನಿಯಲ್ಲಿ ಆಡಿದರೆ, ಖಂಡಿತಾ ಅಂತರಾಷ್ಟ್ರೀಯ ಕ್ರಿಕೆಟ್'ಗೆ ಕಮ್'ಬ್ಯಾಕ್ ಮಾಡುವುದಾಗಿ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ. ಇದಷ್ಟೇ ಅಲ್ಲದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಜತೆಗಿನ ಒಡನಾಡದ ಬಗ್ಗೆಯೂ ಈ ಕಾರ್ಯಕ್ರಮದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.
ಬಿಗ್‌ಬ್ಯಾಶ್‌ನಿಂದ ಹಿಂದೆ ಸರಿದ ಎಬಿ ಡಿ ವಿಲಿಯರ್ಸ್
2023ರ ವಿಶ್ವಕಪ್ ವೇಳೆಗೆ ನನಗೆ 39 ವರ್ಷಗಳಾಗಿರುತ್ತವೆ. ಆಗಲೂ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರೆ, ನಾನೂ ಕೂಡಾ ವಿಶ್ವಕಪ್ ಆಡುತ್ತೇನೆ ಎಂದು ನಗುತ್ತಾ ಎಬಿಡಿ ಉತ್ತರಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ನಾನು ಫಿಟ್ ಇದ್ದಾಗ ಆಡಿದ್ದೇನೆ, ಇಲ್ಲದಿದ್ದಾಗ ವಿಶ್ರಾಂತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ವಿರಾಟ್ ಕೊಹ್ಲಿಯ ಹೃದಯ ವೈಶಾಲ್ಯತೆಯನ್ನು ಎಬಿಡಿ ತಮ್ಮ ಮಾತುಗಳಲ್ಲಿ ವ್ಯಕ್ತಪಡಿಸಿದ್ದಾರೆ. ಎಬಿಡಿ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದರ ಸಂಪೂರ್ಣ ವಿಡಿಯೋ ಇಲ್ಲಿದೆ ನೋಡಿ....
ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟಿಗ ಎಬಿಡಿ, 338 ಪಂದ್ಯಗಳನ್ನಾಡಿ 9577 ರನ್ ಬಾರಿಸಿದ್ದಾರೆ. ಇನ್ನು 114 ಟೆಸ್ಟ್ ಪಂದ್ಯಗಳನ್ನಾಡಿ 8765 ರನ್ ಸಿಡಿಸಿದ್ದಾರೆ. 2018ರಲ್ಲಿ ತವರಿನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಜಯಿಸಿದ ಬೆನ್ನಲ್ಲೇ ಮೇನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್'ಗೆ ದಿಢೀರ್ ವಿದಾಯ ಘೋಷಿಸಿದ್ದರು. ಎಬಿಡಿ ಅಂತರಾಷ್ಟ್ರೀಯ ಕ್ರಿಕೆಟ್'ಗೆ ವಿದಾಯ ಹೇಳಿದ್ದರು, ಹಲವಾರು ಟಿ20 ಲೀಗ್'ನಲ್ಲಿ ಆಡುತ್ತಿದ್ದಾರೆ.
ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ...
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.