2020ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪ್ರಕಟ

Published : Jan 29, 2019, 11:41 AM IST
2020ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪ್ರಕಟ

ಸಾರಾಂಶ

2020ರ  ಐಸಿಸಿ ಪುರುಷರ ಹಾಗೂ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತದ ಗುಂಪಿನಲ್ಲಿ ಬಲಿಷ್ಠ ಸೌತ್ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳಿವೆ. ಇಲ್ಲಿದೆ ಟೂರ್ನಿ ವೇಳಾಪಟ್ಟಿ ವಿವರ.  

ದುಬೈ(ಜ.29): ಐಸಿಸಿ ಪುರುಷರ ಹಾಗೂ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 2020ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಪ್ರತಿಷ್ಠಿತ ಟೂರ್ನಿಯಲ್ಲಿ ಭಾರತ 2ನೇ ಗುಂಪಿನಲ್ಲಿದೆ. ಇದೇ ಗುಂಪಿನಲ್ಲಿ ಇಂಗ್ಲೆಂಡ್, ಸೌತ್ಆಫ್ರಿಕಾ ಹಾಗೂ ಆಫ್ಘಾನಿಸ್ತಾನ ತಂಡಗಳಿವೆ.

 

 

ಇದನ್ನೂ ಓದಿ: ಕಿವೀಸ್ ವಿರುದ್ಧದ 3ನೇ ಪಂದ್ಯದಲ್ಲಿ 7 ವಿಕೆಟ್ ಗೆಲುವು- ಭಾರತಕ್ಕೆ ಏಕದಿನ ಸರಣಿ!

2020ರ ಆಕ್ಟೋಬರ್ 24 ರಿಂದ ನವೆಂಬರ್ 15 ರ ವರೆಗೆ ಪುರುಷರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ನವೆಂಬರ್ 11, 12 ರಂದು 2 ಸೆಮಿಫೈನಲ್ ಪಂದ್ಯಗಳು ನಡೆಯಲಿದೆ. ಇನ್ನು ಫೈನಲ್ ಪಂದ್ಯ ನವೆಂಬರ್ 15 ರಂದು ನಡೆಯಲಿದೆ.  ಇದಕ್ಕೂ ಮುನ್ನ ಅಕ್ಟೋಬರ್ 18 ರಿಂದ 23ರ ವರೆಗೆ ಪುರುಷರ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದೆ. 

ಇದನ್ನೂ ಓದಿ: ಐಪಿಎಲ್’ನ ಚಾಂಪಿಯನ್ ತಂಡ ಖರೀದಿಸಲು ಮುಂದಾದ ಬಚ್ಚನ್ ಕುಟುಂಬ..!

ಮಹಿಳಾ ವಿಶ್ವಕಪ್ ಟೂರ್ನಿ ಫೆಬ್ರವರಿ 21 ರಿಂದ ಮಾರ್ಚ್ 8 ವರೆಗೆ ನಡೆಯಲಿದೆ. ಭಾರತ ಮಹಿಳಾ ತಂಡ ಗ್ರೂಪ್ ಎನಲ್ಲಿದೆ. ಈ ಗುಂಪಿನಲ್ಲಿ ಆಸ್ಟ್ರೇಲಿಯಾ,ನ್ಯೂಜಿಲೆಂಡ್, ಶ್ರೀಲಂಕಾ ಹಾಗೂ ಒಂದು ಅರ್ಹತೆ ಪಡೆಯುತ ತಂಡ ಇರಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್