ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪ್ರಕಟ- ನಂ.1 ಸ್ಥಾನ ಕಾಪಾಡಿಕೊಂಡ ಕೊಹ್ಲಿ!

By Web Desk  |  First Published Jan 21, 2019, 8:22 PM IST

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಬಿಡುಗಡೆಯಾಗಿದೆ. ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿ ಮುಂದವರಿದಿದ್ದಾರೆ. ಹಾಗಾದರೆ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಸ್ಥಾನ ಪಡೆದಿರುವ ಇತರ ಟೀಂ ಇಂಡಿಯಾ ಕ್ರಿಕೆಟಿಗರು ಯಾರು? ಇಲ್ಲಿದೆ ವಿವರ.


ದುಬೈ(ಜ.21): ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪ್ರಕಟಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 2ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇದನ್ನೂ ಓದಿ: ಮಾಜಿ ಕ್ರಿಕೆಟಿಗನಿಗೆ ಅಪಘಾತ- ನೆರವಿಗೆ ದಾವಿಸಿದ ಟೀಂ ಇಂಡಿಯಾ ದಿಗ್ಗಜರು!

Tap to resize

Latest Videos

undefined

ವಿರಾಟ್ ಕೊಹ್ಲಿ 922 ರೇಟಿಂಗ್‌ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ ಕೇನ್ ವಿಲಿಯಮ್ಸನ್ 897 ರೇಟಿಂಗ್‌ನೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. 881 ರೇಟಿಂಗ್‌ನೊಂದಿಗೆ ಟೀಂ ಇಂಡಿಯಾದ ಚೇತೇಶ್ವರ್ ಪೂಜಾರ 3ನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನು ರಿಷಬ್ ಪಂತ್ 17ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಇದನ್ನೂ ಓದಿ: ಇಂಜುರಿಯಿಂದ ಚೇತರಿಕೆ - 2019ರ ಐಪಿಎಲ್‌ಗೆ ಪೃಥ್ವಿ ಶಾ ಲಭ್ಯ!

ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ರವೀಂದ್ರ ಜಡೇಜಾ 5ನೇ ಸ್ಥಾನದಲ್ಲಿದ್ದರೆ, ಆರ್ ಅಶ್ವಿನ್ 9ನೇ ಸ್ಥಾನ ಅಲಂಕರಿಸಿದ್ದಾರೆ. ಸೌತ್ಆಫ್ರಿಕಾದ ವೇಗಿ ಕಾಗಿಸೋ ರಬಾಡ ಮೊದಲ ಸ್ಥಾನದಲ್ಲಿದ್ದಾರೆ.  ಟೆಸ್ಟ್ ಆಲ್ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ 2ನೇ ಸ್ಥಾನ ಅಲಂಕರಿಸಿದ್ದಾರೆ.

click me!