
ದುಬೈ(ಮಾ.19): 12ನೇ ಆವೃತ್ತಿ ಐಪಿಎಲ್ ಕ್ರಿಕೆಟ್ ಮುಗಿದ ಬೆನ್ನಲ್ಲೇ, ಪ್ರತಿಷ್ಠಿತ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಮಾ.30 ರಿಂದ ವಿಶ್ವಚಾಂಪಿಯನ್ ಪಟ್ಟಕ್ಕಾಗಿ ಹೋರಾಟ ನಡೆಯಲಿದೆ. ಇದೀಗ ಐಸಿಸಿ, ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ದಿನಾಂಕವನ್ನು ಬಹಿರಂಗ ಪಡಿಸಿದೆ.
ಇದನ್ನೂ ಓದಿ: ಅಂಬಾಟಿ ಇಲ್ಲ, ರಾಹುಲ್ ಅಲ್ಲ- 4ನೇ ಸ್ಥಾನಕ್ಕೆ ದಾದ ಸೂಚಿಸಿದ್ರು ಹೊಸ ಹೆಸ್ರು!
ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿ ಪಂದ್ಯ ಟಿಕೆಟ್ ಮಾರಾಟ ಮಾರ್ಚ್ 21 ರಿಂದ ಆರಂಭವಾಗಲಿದೆ ಎಂದು ಐಸಿಸಿ ಹೇಳಿದೆ. ಲೀಗ್‌ನಿಂದ ಫೈನಲ್ ಸೇರಿದಂತೆ ಎಲ್ಲಾ ಪಂದ್ಯಗಳ ಟಿಕೆಟ್ ಮಾರಾಟ ಆರಂಭಗೊಳ್ಳಲಿದೆ. ಎಲ್ಲಾ ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಲಭ್ಯ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಒಟ್ಟು 8 ಲಕ್ಷ ಟಿಕೆಟ್‌ಗಾಗಿ 30 ಲಕ್ಷ ಕ್ರಿಕೆಟ್ ಅಭಿಮಾನಿಗಳು ಬೇಡಿಕೆ ಸಲ್ಲಿಸಿದ್ದಾರೆ ಎಂದು ಐಸಿಸಿ ಹೇಳಿದೆ.
ಇದನ್ನೂ ಓದಿ: ವಿಶ್ವಕಪ್ 2019: ಟೀಂ ಇಂಡಿಯಾ ಪ್ರಕಟಿಸಿದ ಅನಿಲ್ ಕುಂಬ್ಳೆ!
ಜೂನ್ 16 ರ ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ಟಿಕೆಟ್‌ಗಾಗಿ ಭಾರಿ ಬೇಡಿಕೆ ಇದೆ. ಮ್ಯಾಂಚೆಸ್ಟ್‌ನಲ್ಲಿ ನಡೆಯಲಿರುವ ಈ ಪಂದ್ಯ ವೀಕ್ಷಿಸಲು 25,000 ಸೀಟಿನ ವ್ಯವಸ್ಥೆ ಇದೆ. ಆದರೆ ಈಗಾಗಲೇ 4 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಟಿಕೆಟ್ ಬೇಡಿಕೆ ಸಲ್ಲಿಸಿದ್ದಾರೆ ಎಂದು ಐಸಿಸಿ ಹೇಳಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.